ಬಳ್ಳಾರಿ: ಮತದಾರರ ಜಾಗೃತಿಗೆ ಸೆ. 20ರಂದು ಮ್ಯಾರಥಾನ್
ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್ಐಆರ್-2026) ಹಾಗೂ ಸ್ವೀಪ್ ಕಾರ್ಯಕ್ರಮ ಅಂಗವಾಗಿ ಸಾರ್ವಜನಿಕರಲ್ಲಿ ಮತದಾರರ ಮಹತ್ವ ಮತ್ತು ಜಾಗೃತಿ ಮೂಡಿಸಲು ಸೆಪ್ಟೆಂಬರ್ 20 ರಂದು ಬಳ್ಳಾರಿ ನಗರದಲ್ಲಿ 4 ಕಿಲೋಮೀಟರ್ ಮ್ಯಾರಥಾನ್ ಕಾರ್ಯಕ್ರಮ ಹಮ
ಬಳ್ಳಾರಿ: ಮತದಾರರ ಜಾಗೃತಿಗೆ ಸೆ. 20ರಂದು ಮ್ಯಾರಥಾನ್


ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್ಐಆರ್-2026) ಹಾಗೂ ಸ್ವೀಪ್ ಕಾರ್ಯಕ್ರಮ ಅಂಗವಾಗಿ ಸಾರ್ವಜನಿಕರಲ್ಲಿ ಮತದಾರರ ಮಹತ್ವ ಮತ್ತು ಜಾಗೃತಿ ಮೂಡಿಸಲು ಸೆಪ್ಟೆಂಬರ್ 20 ರಂದು ಬಳ್ಳಾರಿ ನಗರದಲ್ಲಿ 4 ಕಿಲೋಮೀಟರ್ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅಂದು ಬೆಳಿಗ್ಗೆ 7 ಗಂಟೆಗೆ ನಗರದ ಎನ್ಸಿಸಿ ಮೈದಾನದಿಂದ ಮ್ಯಾರಥಾನ್ ಆರಂಭವಾಗಲಿದೆ.

*ಮ್ಯಾರಥಾನ್ ಸಾಗುವ ಮಾರ್ಗ:*

ಎನ್ಸಿಸಿ ಮೈದಾನದಿಂದ ಪ್ರಾರಂಭವಾಗುವ ಓಟವು ಸುಧಾ ಕ್ರಾಸ್, ಇನ್ಫೆಂಟ್ರಿ ರಸ್ತೆ, ಎಸ್ಪಿ ವೃತ್ತದ ಮಾರ್ಗವಾಗಿ ಸಾಗಿ ದುರ್ಗಮ್ಮ ದೇವಸ್ಥಾನದ ಬಳಿ ಮುಕ್ತಾಯಗೊಳ್ಳಲಿದೆ.

ಈ ಜಾಗೃತಿ ಓಟದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande