
ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಮಹಾರಾಷ್ಟçದ ನಾಗಪುರ ದೀಕ್ಷಾಭೂಮಿಯಲ್ಲಿ 2026ರ ಅಕ್ಟೋಬರ್ 20 ರಂದು (ವಿಜಯದಶಮಿ ದಿನ) ನಡೆಯಲಿರುವ ಧಮ್ಮ ಚಕ್ರ ಪ್ರವರ್ತನಾ ದಿನದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ದೀಕ್ಷಾಭೂಮಿ ಯಾತ್ರೆ’ಗೆ ತೆರಳಲು ಅರ್ಹ ಯಾತ್ರಾರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
2026-27ನೇ ಸಾಲಿನ ಈ ಯಾತ್ರೆಗಾಗಿ ಅಕ್ಟೋಬರ್ 18 ರಿಂದ 20 ರವರೆಗೆ ಕೆ.ಎಸ್.ಆರ್.ಟಿ.ಸಿ. ಮತ್ತು ಇತರ ಸಾರಿಗೆ ಬಸ್ಸು ಹಾಗೂ ರೈಲಿನ ಮೂಲಕ ಪ್ರಯಾಣಿಸಲು ವ್ಯವಸ್ಥೆ ಮಾಡಲಾಗುತ್ತದೆ. ಯಾತ್ರೆಗೆ ಹೋಗಬಯಸುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ಅರ್ಹ ಯಾತ್ರಾರ್ಥಿಗಳು ಸೆಪ್ಟೆಂಬರ್ 30-09-2026 ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://swd.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ, ಅರ್ಜಿಯ ಪ್ರತಿಯೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ಗಳ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಸಂಬ0ಧಪಟ್ಟ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕಾಗಿದೆ ಎಂದು ಬಳ್ಳಾರಿಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್