
ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ 2021-22ನೇ ಸಾಲಿನ ‘ವಸತಿ ಯೋಜನೆ’ಯ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಸ್ವಂತ ನಿವೇಶನ ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಮನೆ ನಿರ್ಮಾಣಕ್ಕಾಗಿ ರಾಜೀವ್ ಗಾಂಧಿ ವಸತಿ ನಿಗಮದಿಂದ 2 ಲಕ್ಷ ರೂ. ಅನುದಾನವನ್ನು ಮಂಜೂರು ಮಾಡಿ, ಹಂತ-ಹ0ತವಾಗಿ ಬಿಡುಗಡೆ ಮಾಡಲಾಗುತ್ತದೆ. ಈ ಹಿಂದೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಬಾಕಿ ಉಳಿದಿರುವ ಅಭ್ಯರ್ಥಿಗಳು ಸಹ ಮರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತರು ಸಂಬಂಧಪಟ್ಟ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೋಟೆ, ಬಳ್ಳಾರಿ ಅಥವಾ ದೂ: 9480843023 ಸಂಖ್ಯೆಯನ್ನು ಸಂಪರ್ಕಿಸಬಹುದು.
ಮಧ್ಯವರ್ತಿಗಳ ಮೂಲಕ ಅರ್ಜಿ ಸಲ್ಲಿಸುವುದು ಅಥವಾ ಮಧ್ಯವರ್ತಿಗಳ ಹಸ್ತಕ್ಷೇಪ ಕಂಡುಬಂದಲ್ಲಿ ಅಂತಹ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್