ಸೆ.21ರಿಂದ ರಾಜ್ಯಾದ್ಯಂತ ಪಿಡಿಒಗಳ ಹೋರಾಟ ಆರಂಭ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹ
ಬಾಗಲಕೋಟೆ, 18 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ.21ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಅಸಹಕಾರ ಚಳುವಳಿ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯ
ಧರಣಿ


ಬಾಗಲಕೋಟೆ, 18 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ.21ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಅಸಹಕಾರ ಚಳುವಳಿ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ರಾಜಶೇಖರ ವಾರದ ತಿಳಿಸಿದ್ದಾರೆ.

ಬಾಗಲಕೋಟೆ ನಗರದ ಕಾನಿಪ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳಲ್ಲಿ ಪಿಡಿಒಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಆದರೆ, ತಮ್ಮ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಹಲವು ಬಾರಿ ಸರ್ಕಾರದ ಗಮನಕ್ಕೆ ತಂದಿದ್ದರೂ ಸಮರ್ಪಕವಾಗಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹೋರಾಟದ ಹಾದಿ ಹಿಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಹೆಚ್ಚುತ್ತಿರುವ ಆಡಳಿತಾತ್ಮಕ ಹಾಗೂ ಅಭಿವೃದ್ಧಿ ಕಾರ್ಯಗಳ ಒತ್ತಡ, ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಸೇರಿದಂತೆ ಸಂಘವು ಮುಂದಿಟ್ಟಿರುವ ವಿವಿಧ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಿಡಿಒಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರದ ಯೋಜನೆಗಳ ಅನುಷ್ಠಾನ, ಸಾರ್ವಜನಿಕರಿಗೆ ವಿವಿಧ ಸೇವೆಗಳನ್ನು ಒದಗಿಸುವುದು ಹಾಗೂ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಮೇಲ್ವಿಚಾರಣೆಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಅವರ ಸೇವಾ ಪರಿಸ್ಥಿತಿಯನ್ನು ಸುಧಾರಿಸುವುದು ಮತ್ತು ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಸೆ.21ರಿಂದ ಆರಂಭವಾಗಲಿರುವ ಅನಿರ್ದಿಷ್ಟಾವಧಿ ಅಸಹಕಾರ ಚಳುವಳಿ ಹಾಗೂ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸರ್ಕಾರ ಕೂಡಲೇ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮುಂದುವರಿಸಲಾಗುವುದು ಎಂದು ರಾಜಶೇಖರ ವಾರದ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಿದ್ದಾರ್ಥ ಗೋಠೆ, ಉಪಾಧ್ಯಕ್ಷ ಲಕ್ಷ್ಮಣ ಶಾಂತಗೇರಿ, ಪ್ರಧಾನ ಕಾರ್ಯದರ್ಶಿ ಸುರೇಶ ನಾಯಕ, ಎಸ್.ಪಿ. ಹಿರೇಮಠ, ಅರ್ಚನಾ ಕುಲಕರ್ಣಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande