
ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಗುಲ್ಬರ್ಗ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ಕಾರ್ಯ ಮತ್ತು ಪಾಲನೆ ಉಪ-ವಿಭಾಗ, ಸಿರುಗುಪ್ಪ ವತಿಯಿಂದ ಸೆಪ್ಟೆಂಬರ್ 19 ರಂದು ತಾಲೂಕಿನ ಹೆಚ್. ಹೊಸಳ್ಳಿ ಗ್ರಾಮದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರಜಾಸೇವಾ ಹಾಗೂ ಗ್ರಾಹಕರ ಕುಂದು-ಕೊರತೆ ನಿವಾರಣೆ ಮತ್ತು ಎಸ್ಒಪಿ ಕುರಿತು ಜಾಗೃತಿ ಮೂಡಿಸುವ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಹೆಚ್. ಹೊಸಳ್ಳಿ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಗೆ ಒಳಪಡುವ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ, ತಮ್ಮ ವಿದ್ಯುತ್ ಸಂಬAಧಿತ ಸಮಸ್ಯೆಗಳು ಹಾಗೂ ಕುಂದು-ಕೊರತೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ಪಡೆದುಕೊಳ್ಳಬಹುದು.
ವಿದ್ಯುತ್ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಸಭೆಯ ಸದುಪಯೋಗ ಪಡೆದುಕೊಳ್ಳಬೇಕಾಗಿ ಸಿರುಗುಪ್ಪ ಜೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ವಿ) ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್