ಸೆ.೨೧-೨೨ರಂದು ಶ್ರೀಮತಿ ಅಲ್ಲಂ ಸುಮಂಗಳಮ್ಮ ಕಾಲೇಜಿನ ಸುವರ್ಣ ಮಹೋತ್ಸವ
ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನ ಸುವರ್ಣ ಮಹೋತ್ಸವವು ಸೆಪ್ಟಂಬರ್ 21ರ ಸೋಮವಾರ ಮತ್ತು ಸೆಪ್ಟಂಬರ್ 22ರ ಮಂಗಳವಾರ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಶ್ರೀಮತಿ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನ
ಬಳ್ಳಾರಿ : ಶ್ರೀಮತಿ ಅಲ್ಲಂ ಸುಮಂಗಳಮ್ಮ ಕಾಲೇಜಿನ `ಸುವರ್ಣ ಮಹೋತ್ಸವ' ಸೆಪ್ಟಂಬರ್ 21 ಮತ್ತು 22 ರಂದು


ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನ ಸುವರ್ಣ ಮಹೋತ್ಸವವು

ಸೆಪ್ಟಂಬರ್ 21ರ ಸೋಮವಾರ ಮತ್ತು ಸೆಪ್ಟಂಬರ್ 22ರ ಮಂಗಳವಾರ ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಶ್ರೀಮತಿ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷೆ ಕಾತ್ಯಾಯಿನಿ ಮರಿದೇವಯ್ಯ ಮತ್ತು ವೀರಶೈವ ವಿದ್ಯಾವರ್ಧಕ ಸಂಘದ ಖಜಾಂಚಿಗಳಾದ ಬೈಲುವದ್ದಿಗೇರಿ ಎರ್ರಿಸ್ವಾಮಿ ಅವರು ಸುದ್ದಿಗಾರರಿಗೆ ಶುಕ್ರವಾರ ಈ ಮಾಹಿತಿ ನೀಡಿದ್ದು, 164 ವಿದ್ಯಾರ್ಥಿನಿಯರಿಂದ 1969ರಲ್ಲಿ ಪ್ರಾರಂಭ ಆಗಿರುವ ಶ್ರೀಮತಿ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನಲ್ಲಿ ಪ್ರಸ್ತುತ 2,500 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈವರೆಗೆ 200 ಕ್ಕೂ ಹೆಚ್ಚಿನ ವಿದ್ಯಾರ್ಥಿನಿಯರು ರ್ಯಾಂಕ್ಗಳನ್ನು ಪಡೆದಿದ್ದಾರೆ ಎಂದರು.

ಶ್ರೀಮತಿ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಮಾನ್ಯತೆಯನ್ನು ಪಡೆದಿದೆ.

ಸೆಪ್ಟಂಬರ್ 20ರ ಭಾನುವಾರ ಬೆಳಗ್ಗೆ ಬಸವ ಭವನದಿಂದ ಶೋಭಾ ಯಾತ್ರೆ ನಡೆಯಲಿದೆ. ಈ ಶೋಭಾ ಯಾತ್ರೆಯಲ್ಲಿ ವಿದ್ಯಾರ್ಥಿಗಳು, ವೀರಶೈವ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯರು ಮತ್ತು ಕಾಲೇಜಿನ ಸಿಬ್ಬಂದಿಗಳು - ಸಂಘದ ವಿವಿಧ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಸೆಪ್ಟಂಬರ್ 21 ರ ಸೋಮವಾರ ಬೆಳಗ್ಗೆ 10 ಕ್ಕೆ ಸುವರ್ಣ ಮಹೋತ್ಸವವು ಪ್ರಾರಂಭವಾಗಲಿದೆ. ಉಜ್ಜಯಿನಿ ಸಿದ್ದಲಿಂಗ ಶ್ರೀಗಳು ಉದ್ಘಾಟಿಸಲಿದ್ದಾರೆ. ಎಮ್ಮಿಗನೂರಿನ ವಾಮದೇವ ಮಹಾಂತ ಶ್ರೀಗಳು ಸಾನಿಧ್ಯವಹಿಸಲಿದ್ದಾರೆ.

ಸಂಸದ ಇ.ತುಕರಾಂ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಣೇಕಲ್ ಮಹಾಂತೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ. ಅಕ್ಕಹಾದೇವಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ, ಜಯದೇವ ಆಸ್ಪತ್ರೆಯ ಪ್ರಾಧ್ಯಾಪಕರಾದ ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ, ಮೇಯರ್ ಪಿ. ಗಾದೆಪ್ಪ, ವಿಧಾನಪರಿಷತ್ ಸದಸ್ಯರಾದ ವೈ.ಎಂ. ಸತೀಶ್, ಡಾ. ಚಂದ್ರಶೇಖರ ಪಾಟೀಲ್, ಶಶೀಲ್ ಜಿ. ಶಾಸಕಿ

ಲತಾ ಮಲ್ಲಿಕಾರ್ಜುನ, ತೊಗರಿ ವೀರಪ್ಪನವರ ವಂಶಸ್ಥರಾದ ಚಂದ್ರಶೇಖರ ಪಾಶ್ಚಾಪುರ ಅವರು ಮುಖ್ಯ ಅತಿಥಿಗಳಾಗಿದ್ದಾರೆ.

`ಸುವರ್ಣ ಸಿರಿ'

`ಸುವರ್ಣ ಸಿರಿ' ಸ್ಮರಣ ಸಂಚಿಕೆಯನ್ನು ಅಲ್ಲಂ ವೀರಭದ್ರಪ್ಪ ಮತ್ತು ಅಲ್ಲಂ ಸುನಂದಾ ಅವರು ಬಿಡುಗಡೆ ಮಾಡಲಿದ್ದಾರೆ.

ಅಂದು ಸಂಜೆ 4.30 ಕ್ಕೆ ಸಾಂಸ್ಕøತಿಕ ಕಾರ್ಯಕ್ರಮವನ್ನು ನಿವೃತ್ತ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರು ಅವರು ಉದ್ಘಾಟನೆ ಮಾಡಲಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಮಹಾನಗರ ಪಾಲಿಕೆಯ ಆಯುಕ್ತರಾದ ಪಿ.ಎಸ್. ಮಂಜುನಾಥ, ಉದ್ಯಮಿ ಗಾಲಿ ಲಕ್ಷ್ಮೀ ಅರುಣಾ ಸೇರಿದಂತೆ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಂಜೆ 6.30ರಿಂದ 9.30ರವರೆಗೆ ರಾಮಚಂದ್ರ ಜಿ. ಹಡಪದ್ ಕಲಾತಂಡದಿಂದ `ಗಾಯನ ಸುಧೆ' ನಡೆಯಲಿದೆ.

ಸೆಪ್ಟಂಬರ್ 22ರ ಬೆಳಿಗ್ಗೆ 10 ಗಂಟೆಗೆ ಕೊಟ್ಟೂರು ಸಂಸ್ಥಾನದ ಬಸವಲಿಂಗಸ್ವಾಮಿಗಳು ಸಾನಿಧ್ಯದಲ್ಲಿ ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. ಗುರುನಮನವು ನಿವೃತ್ತ ಪ್ರಾಂಶುಪಾಲ ಪಿ. ಗುರುಬಸಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಂಜೆ 4.30 ಕ್ಕೆ ಸಮಾರೋಪ ಸಮಾರಂಭ. ವಿದ್ಯಾರ್ಥಿನಿಯರಿಂದ ಮತ್ತು ನಾಡಿನ ಖ್ಯಾತ ಕಲಾವಿದರಿಂದ ಸಂಗೀತ, ನೃತ್ಯ, ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ವೀರಶೈವ ವಿದ್ಯಾವರ್ಧಕ ಸಂಘದ ಸಹ ಕಾರ್ಯದರ್ಶಿಗಳಾದ ಯಾಳ್ಪಿ ಮೇಟಿ ಪಂಪನಗೌಡ, ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಜೆ.ಎಂ. ಪರ್ವತೀಶ, ಸಂಘದ ಆಜೀವ ಸದಸ್ಯರಾದ ಐ.ಎಂ. ಮಹೇಶ್, ಪ್ರಾಂಶುಪಾಲರಾದ ದೂಪಂ ಸತೀಶ್, ಡಾ. ಗೋವಿಂದರಾಜುಲು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande