
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬದ ಸಂಭ್ರಮದ ಅಂಗವಾಗಿ ಅವರ ಬಹುನಿರೀಕ್ಷಿತ ಚಿತ್ರ ‘ನೆಕ್ಸ್ಟ್ ಲೆವೆಲ್’ ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಉಪೇಂದ್ರ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಡಬಲ್ ಧಮಾಕಾ ದೊರೆತಿದ್ದು, ಒಂದೆಡೆ ನೆಚ್ಚಿನ ನಟನ ಹುಟ್ಟುಹಬ್ಬದ ಸಂಭ್ರಮ, ಮತ್ತೊಂದೆಡೆ ಹೊಸ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
‘ನೆಕ್ಸ್ಟ್ ಲೆವೆಲ್’ ಚಿತ್ರದ ಪೋಸ್ಟರ್ನಲ್ಲಿ ಉಪೇಂದ್ರ ಅವರ ವಿಭಿನ್ನ ಲುಕ್ ಗಮನ ಸೆಳೆಯುತ್ತಿದ್ದು, ಚಿತ್ರದ ಕುರಿತು ಕುತೂಹಲ ಮತ್ತಷ್ಟು ಹೆಚ್ಚಿಸಿದೆ. ವಿಶೇಷ ಪೋಸ್ಟರ್ ಬಿಡುಗಡೆಯೊಂದಿಗೆ ಚಿತ್ರದ ಮೇಲಿನ ನಿರೀಕ್ಷೆಯೂ ಹೆಚ್ಚಾಗಿದೆ.
“ಉಪೇಂದ್ರ ಅವರ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ‘ನೆಕ್ಸ್ಟ್ ಲೆವೆಲ್’ ಚಿತ್ರದ ಪೋಸ್ಟರ್ ಅನ್ನು ಅಭಿಮಾನಿಗಳಿಗಾಗಿ ಬಿಡುಗಡೆ ಮಾಡಲಾಗಿದೆ. ಚಿತ್ರವು ಹೊಸತನದೊಂದಿಗೆ ಪ್ರೇಕ್ಷಕರನ್ನು ರಂಜಿಸಲಿದೆ” ಎಂದು ಚಿತ್ರತಂಡ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R