ಲೋಕಾಪೂರದಲ್ಲಿ ಮಾರುತೇಶ್ವರ ದೇವಸ್ಥಾನ ಉದ್ಘಾಟನೆ ಸಂಭ್ರಮ
ಬಾಗಲಕೋಟೆ, 19 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪೂರ ಪಟ್ಟಣದ ವೆಂಕಟೇಶ್ವರ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಮಾರುತೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಶ್ರೀ ಮಾರುತೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಭಕ್ತಿಭಾವದ ವಿವಿಧ ಧಾರ್ಮಿಕ ಕ
ಪೂಜೆ


ಬಾಗಲಕೋಟೆ, 19 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪೂರ ಪಟ್ಟಣದ ವೆಂಕಟೇಶ್ವರ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಮಾರುತೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಶ್ರೀ ಮಾರುತೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಭಕ್ತಿಭಾವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಭವ್ಯ ಕುಂಭ ಮೆರವಣಿಗೆಯಲ್ಲಿ ಸುಮಾರು 500 ಸುಮಂಗಲೆಯರು ಕುಂಭಗಳನ್ನು ಹೊತ್ತು ಪಾಲ್ಗೊಂಡು ಧಾರ್ಮಿಕ ಸಂಭ್ರಮಕ್ಕೆ ಮೆರಗು ತಂದರು. ಸಾಂಪ್ರದಾಯಿಕ ಉಡುಗೆ-ತೊಡುಗೆಯಲ್ಲಿ ಮಹಿಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಿದ ದೃಶ್ಯ ಭಕ್ತರ ಗಮನ ಸೆಳೆಯಿತು.

ಮಂಗಳವಾದ್ಯಗಳು, ಭಜನೆ ಹಾಗೂ ಧಾರ್ಮಿಕ ಘೋಷಣೆಗಳೊಂದಿಗೆ ನಡೆದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಮಾರ್ಗದುದ್ದಕ್ಕೂ ಭಕ್ತರು ಮೆರವಣಿಗೆಯನ್ನು ಕಣ್ತುಂಬಿಕೊಂಡು ದೇವರ ದರ್ಶನ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಮಾರುತೇಶ್ವರ ದೇವಸ್ಥಾನವು ವೆಂಕಟೇಶ್ವರ ಪಟ್ಟಣದ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಪ್ರಮುಖ ಕೇಂದ್ರವಾಗಲಿದೆ. ದೇವಸ್ಥಾನದ ಉದ್ಘಾಟನೆ ಮತ್ತು ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ವಿವಿಧ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳು ಹಾಗೂ ಲೋಕಾಪೂರ ಪಟ್ಟಣದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮಾರುತೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಕಟ್ಟಿ, ದೇವಸ್ಥಾನದ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಕುಂಭ ಮೆರವಣಿಗೆ ಆಯೋಜಿಸಲಾಗಿದ್ದು, ಸುಮಾರು 500 ಸುಮಂಗಲೆಯರು ಭಕ್ತಿಭಾವದಿಂದ ಪಾಲ್ಗೊಂಡಿರುವುದು ಕಾರ್ಯಕ್ರಮದ ವಿಶೇಷವಾಗಿದೆ ಎಂದು ತಿಳಿಸಿದರು.

ದೇವಸ್ಥಾನದ ನಿರ್ಮಾಣ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಯಶಸ್ಸಿಗೆ ಸಹಕರಿಸಿದ ಭಕ್ತರು, ದಾನಿಗಳು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ದೇವಸ್ಥಾನ ಸಮಿತಿಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು. ಕಾರ್ಯಕ್ರಮವು ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ನಡೆಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande