ತಂದೆ-ಮಗಳ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬೆಳಗಾವಿ, 19 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಆಸ್ತಿ ವಿಚಾರವಾಗಿ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಿತ್ತೂರು ತಾಲೂಕಿನ ಅವರಾದ
Belagavi Father-Daughter Murder Over Property Dispute Three Arrested


ಬೆಳಗಾವಿ, 19 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಆಸ್ತಿ ವಿಚಾರವಾಗಿ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಸೆ.16ರಂದು ಬೆಳಿಗ್ಗೆ ಸುಮಾರು 11.15ಕ್ಕೆ ಘಟನೆ ನಡೆದಿತ್ತು. ಮಾಜಿ ಯೋಧ ರುದ್ರಪ್ಪ ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ ಕೊಲೆಯಾಗಿದ್ದರು. ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ನಡೆದಿದ್ದ ವ್ಯಾಜ್ಯವೇ ಕೊಲೆಗೆ ಕಾರಣ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಸಪ್ಪ ಶಿವನಪ್ಪ ಕುಂದರಗಿ (65), ಸಂಗಪ್ಪ ಶಿವನಪ್ಪ ಕುಂದರಗಿ (55) ಹಾಗೂ ಬಸಪ್ಪನ ಪುತ್ರ ಮಡಿವಾಳಪ್ಪ ಕುಂದರಗಿ (34) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಕುಡಗೋಲು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿ ತಂದೆ-ಮಗಳನ್ನು ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕಿತ್ತೂರು ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande