ಎಸ್ಐಆರ್ ವಿಶೇಷ ನೋಂದಣಿ ಅಭಿಯಾನ ಜಾಗೃತಿ ಜಾಥಾ
ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಸೆ.19 ಮತ್ತು 20ರಂದು ನಡೆಯಲಿರುವ ವಿಶೇಷ ನೋಂದಣಿ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಾಹನ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗ್ರೇಟರ್ ಬೆಂಗಳೂರು ಪ್ರಾಧಿಕ
Bengaluru-SIR-special-voter-registration-campaign-vehicle-awareness-drive


ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಸೆ.19 ಮತ್ತು 20ರಂದು ನಡೆಯಲಿರುವ ವಿಶೇಷ ನೋಂದಣಿ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಾಹನ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಂ. ಮಹೇಶ್ವರ್ ರಾವ್ ಮತ್ತು ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಜಲಮಂಡಳಿಯ ಸುವರ್ಣ ಭವನದ ಮುಂಭಾಗದಲ್ಲಿ ಜಾಗೃತಿ ಕರಪತ್ರ ಬಿಡುಗಡೆ ಮಾಡುವ ಮೂಲಕ ವಾಹನ ಪ್ರಚಾರಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಆಯುಕ್ತೆ ಕೆ.ಆರ್. ಪಲ್ಲವಿ, ಮತದಾರರ ನೋಂದಣಾಧಿಕಾರಿ ಎಂ. ಶ್ರೀನಿವಾಸ, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಚೆಂಡೆವಾದನ ತಂಡ ಹಾಗೂ ಪ್ರಚಾರ ಆಟೋಗಳೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾಥಾ ನಡೆಸಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಜಾಗೃತಿ ಕರಪತ್ರಗಳನ್ನು ವಿತರಿಸಲಾಯಿತು.

ವಿಶೇಷ ನೋಂದಣಿ ಅಭಿಯಾನದ ಮೂಲಕ ಮತದಾರರು ತಮ್ಮ ಹೆಸರು, ವಿಳಾಸ ಹಾಗೂ ಮತದಾರರ ಪಟ್ಟಿಯಲ್ಲಿರುವ ಇತರ ವಿವರಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ತಿದ್ದುಪಡಿ ಅಥವಾ ಹೊಸದಾಗಿ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಚುನಾವಣಾಧಿಕಾರಿಗಳು ತಿಳಿಸಿದರು.

ಎರಡು ದಿನಗಳ ಅಭಿಯಾನದ ಅವಧಿಯಲ್ಲಿ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯ ಮತಗಟ್ಟೆಗಳು, ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳು ಮತ್ತು ಕಂದಾಯ ವಾರ್ಡ್ ಕಚೇರಿಗಳಲ್ಲಿ

ಎಸ್ಐಆರ್ ಸಂಬಂಧಿತ ಮಾಹಿತಿ ಹಾಗೂ ಅಗತ್ಯ ತಿದ್ದುಪಡಿ, ನೋಂದಣಿ ಸೌಲಭ್ಯ ಲಭ್ಯವಿರಲಿದೆ. ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಏಳು ಆಟೋರಿಕ್ಷಾಗಳ ಮೂಲಕ ವ್ಯಾಪಕ ಜಾಗೃತಿ ಪ್ರಚಾರ ನಡೆಸಲಾಗುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande