ಸಿಎಂ ಆಸ್ತಿ ಸಂಪತ್ತಿನಿಂದ ರಾಜ್ಯದ ರೈತರ ಸಾಲ ಮನ್ನಾ ಮಾಡಬಹುದು: ಎಚ್.ಡಿ. ಕುಮಾರಸ್ವಾಮಿ
ರೈತರ ಸಾಲ ಮನ್ನಾ ಮಾಡಬಹುದು: ಎಚ್.ಡಿ. ಕುಮಾರಸ್ವಾಮಿ
CM-Property-Can-Waive-Karnataka-Farmers-Loans-HDK-Kumaraswamy-Statement


ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮನಸ್ಸು ಮಾಡಿದರೆ ತಮ್ಮ ಬಳಿ ಇರುವ ಸಂಪತ್ತಿನಿಂದಲೇ ರಾಜ್ಯದ ರೈತರ ಸಾಲ ಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದಾಗ ಕೇಂದ್ರ ಸರ್ಕಾರದ ಬಳಿ ಹಣ ಕೇಳಿರಲಿಲ್ಲ ಎಂದು ಅವರು ಹೇಳಿದರು.

“ನಾನು ರೈತರ ಸಾಲ ಮನ್ನಾ ಮಾಡಿದಾಗ ಮೋದಿ ಅಥವಾ ಮನಮೋಹನ್ ಸಿಂಗ್ ಅವರ ಬಳಿ ಹಣ ಕೇಳಿದ್ದೇನಾ? ಸಿಎಂ ಸಂಪಾದನೆ ಮಾಡಿರುವ ಹಣವನ್ನು ಜನರಿಗೆ ಕೊಟ್ಟರೆ 2028ರಲ್ಲೂ ಮುಖ್ಯಮಂತ್ರಿಯಾಗಬಹುದು ಎಂದರು.

ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದ ಅವರು, ಸಾಲ ಮನ್ನಾ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande