ಜಮೀನಿನಲ್ಲಿ ಹಾವು ಕಡಿದು ರೈತ ಸಾವು
ಜಮೀನಿನಲ್ಲಿ ಹಾವು ಕಡಿದು ರೈತ ಸಾವು
Farmer death from sneackbite


ಮಂಡ್ಯ, 19 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಜಮೀನಿನಲ್ಲಿ ನೀರು ಹಾಯಿಸಲು ತೆರಳಿದ್ದ ರೈತರೊಬ್ಬರು ಹಾವು ಕಡಿತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಬೇಬಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಬೇಬಿ ಗ್ರಾಮದ ರಾಜೇಶ್ (38) ಎಂದು ಗುರುತಿಸಲಾಗಿದೆ. ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿದ್ದ ರಾಜೇಶ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ರಾತ್ರಿ ವೇಳೆ ವಿದ್ಯುತ್ ಪೂರೈಕೆ ನೀಡಿದ್ದ ಹಿನ್ನೆಲೆಯಲ್ಲಿ ಜಮೀನಿಗೆ ನೀರು ಹಾಯಿಸಲು ತೆರಳಿದ್ದ ವೇಳೆ ಹಾವು ಕಡಿದಿದೆ ಎನ್ನಲಾಗಿದೆ.

ಹಾವು ಕಡಿತದಿಂದ ಅಸ್ವಸ್ಥರಾದ ರಾಜೇಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ರಾತ್ರಿ ವೇಳೆ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ನೀಡಿರುವುದೇ ಘಟನೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸರ್ಕಾರ ಹಾಗೂ ಚೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರಿಗೆ ರಾತ್ರಿ ಸಮಯದಲ್ಲಿ ವಿದ್ಯುತ್ ನೀಡುವ ಬದಲು ಹಗಲು ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.ಮೃತ ರೈತ ರಾಜೇಶ್ ಅವರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande