
ಮಂಗಳೂರು, 19 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಕಡಲ ಮಕ್ಕಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಂಗಳೂರಿನ ಮೀನುಗಾರಿಕಾ ಬಂದರಿಗೆ ಶನಿವಾರ ಬೆಳ್ಳಿಗ್ಗೆ ಭೇಟಿ ನೀಡಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಇದೇ ವೇಳೆ ಮೀನುಗಾರರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು, ಅಗತ್ಯತೆಗಳು ಹಾಗೂ ಜೀವನೋಪಾಯದ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಲಾಯಿತು ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಮೀನುಗಾರರು ಪ್ರೀತಿಯಿಂದ ಅಂಜಲ್ ಮೀನನ್ನು ಉಡುಗೊರೆಯಾಗಿ ನೀಡಿದ್ದು ವಿಶೇಷವಾಗಿತ್ತು. ಅವರ ಆತ್ಮೀಯತೆ ಹಾಗೂ ಪ್ರೀತಿಗೆ ಧನ್ಯವಾದಗಳು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.