
ಹುಬ್ಬಳ್ಳಿ, 19 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶುಕ್ರವಾರ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದು, ಇಂದು ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿರುವ ಅಮಿತ್ ಶಾ ಅವರು, ಇಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯಲ್ಲಿ ಕೆಎಲ್‌ಇ ಸಂಸ್ಥೆಯ ನೂತನ ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡ ಹಾಗೂ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.
ಬಳಿಕ ವಿಶೇಷ ವಿಮಾನದ ಮೂಲಕ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ತೆರಳಲಿರುವ ಅವರು, ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಗ್ರಾಮಕ್ಕೆ ಆಗಮಿಸಲಿದ್ದಾರೆ. ಎಕ್ಸಂಬಾದಲ್ಲಿ ಬೀರೇಶ್ವರ ಸಹಕಾರಿ ಸಾಲ ಸಂಸ್ಥೆಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಅಮಿತ್ ಶಾ ಅವರ ಕರ್ನಾಟಕ ಪ್ರವಾಸದ ಕುರಿತು ಅವರ ಕಚೇರಿಯ ಅಧಿಕೃತ ಎಕ್ಸ್ ಖಾತೆಯ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.