ಕನಿಷ್ಠ ವೇತನ ಜಾರಿಗೆ ಆಗ್ರಹ: ಮುಖ್ಯಮಂತ್ರಿಗೆ ಕಾರ್ಮಿಕರಿಂದ ಪತ್ರ
ವಿಜಯಪುರ, 19 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಹಾಗೂ ಬಾಗೇವಾಡಿ ಭಾಗದಲ್ಲಿ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಕನಿಷ್ಠ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಪತ್ರ ಕಳುಹಿಸುವ ಮೂಲಕ ತಮ್ಮ ಬೇಡಿಕೆಯನ್ನು ದಾಖ
ಹೋರಾಟ


ವಿಜಯಪುರ, 19 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಹಾಗೂ ಬಾಗೇವಾಡಿ ಭಾಗದಲ್ಲಿ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಕನಿಷ್ಠ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಪತ್ರ ಕಳುಹಿಸುವ ಮೂಲಕ ತಮ್ಮ ಬೇಡಿಕೆಯನ್ನು ದಾಖಲಿಸಿದರು.

ಆಲಮಟ್ಟಿಯ ಗಾರ್ಡನ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರು, ಬಾಗೇವಾಡಿ ಭಾಗದ ಬಹುಹಳ್ಳಿ ನೀರು ಸರಬರಾಜು ಯೋಜನೆಯ ಕಾರ್ಮಿಕರು ಹಾಗೂ ವಸತಿ ನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ತಮ್ಮ ಸೇವೆಗೆ ತಕ್ಕಂತೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ದಿನನಿತ್ಯದ ಅಗತ್ಯ ಕಾರ್ಯಗಳನ್ನು ನಿರ್ವಹಿಸುತ್ತಿದ್ದರೂ ಸಮರ್ಪಕ ವೇತನ ದೊರೆಯುತ್ತಿಲ್ಲ. ಇದರಿಂದ ಕಾರ್ಮಿಕರು ಹಾಗೂ ಅವರ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಸರ್ಕಾರ ಕಾರ್ಮಿಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕನಿಷ್ಠ ವೇತನ ಜಾರಿಗೊಳಿಸುವ ಮೂಲಕ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರ ಶಂಕರ್ ಜಲ್ಲೇಕರ್, ಕಾರ್ಮಿಕರು ಹಲವು ವರ್ಷಗಳಿಂದ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದರೂ ಅವರ ಪ್ರಮುಖ ಬೇಡಿಕೆಯಾಗಿರುವ ಕನಿಷ್ಠ ವೇತನ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕಾರ್ಮಿಕರ ಸಮಸ್ಯೆಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು. ಕನಿಷ್ಠ ವೇತನ ಜಾರಿಗೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಹಂತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು” ಎಂದು ಶಂಕರ್ ಜಲ್ಲೇಕರ್ ಎಚ್ಚರಿಸಿದರು.

ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಪರಿಶೀಲಿಸಿ, ನ್ಯಾಯಯುತ ಪರಿಹಾರ ಕಲ್ಪಿಸಬೇಕು.

ಕನಿಷ್ಠ ವೇತನ ಸೇರಿದಂತೆ ಕಾರ್ಮಿಕರ ಹಕ್ಕುಗಳಿಗೆ ಸಂಬಂಧಿಸಿದ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಪ್ರತಿಭಟನಾಕಾರರು ಮುಖ್ಯಮಂತ್ರಿ ಅವರಿಗೆ ಕಳುಹಿಸಿದ ಪತ್ರದಲ್ಲಿ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande