ಇಂದು ಮತ್ತು ನಾಳೆ ಎಸ್ಐಆರ್ ವಿಶೇಷ ನೋಂದಣಿ ಅಭಿಯಾನ;ಜಾಗೃತಿ ವಾಹನಗಳಿಗೆ ಚಾಲನೆ
ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 19 ಮತ್ತು 20ರಂದು ನಡೆಯಲಿರುವ ವಿಶೇಷ ನೋಂದಣಿ ಅಭಿಯಾನದ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ವಾಹನ ಪ್ರಚಾರ
ಜಾಗೃತಿ ವಾಹನಗಳಿಗೆ ಚಾಲನೆ


ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 19 ಮತ್ತು 20ರಂದು ನಡೆಯಲಿರುವ ವಿಶೇಷ ನೋಂದಣಿ ಅಭಿಯಾನದ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ವಾಹನ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಎಂ. ಮಹೇಶ್ವರ್ ರಾವ್ ಮತ್ತು ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಉತ್ತರ ಮತ್ತು ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜಲಮಂಡಳಿಯ ಸುವರ್ಣ ಭವನದ ಮುಂಭಾಗದಲ್ಲಿ ಜಾಗೃತಿ ಕರಪತ್ರ ಬಿಡುಗಡೆ ಮಾಡುವ ಮೂಲಕ ವಾಹನ ಪ್ರಚಾರಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಆಯುಕ್ತೆ (ಬೆಂಗಳೂರು ಉತ್ತರ ನಗರ ಪಾಲಿಕೆ) ಕೆ.ಆರ್. ಪಲ್ಲವಿ, ಮತದಾರರ ನೋಂದಣಾಧಿಕಾರಿ ಎಂ. ಶ್ರೀನಿವಾಸ, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಚೆಂಡೆವಾದನ ತಂಡ ಹಾಗೂ ಪ್ರಚಾರ ಆಟೋಗಳೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾಥಾ ನಡೆಸಿ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಜಾಗೃತಿ ಕರಪತ್ರಗಳನ್ನು ವಿತರಿಸುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅರಿವು ಮೂಡಿಸಲಾಯಿತು.

ಎರಡು ದಿನಗಳ ವಿಶೇಷ ನೋಂದಣಿ ಅಭಿಯಾನದ ವೇಳೆ ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯ ಮತಗಟ್ಟೆಗಳು, ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳು ಮತ್ತು ಕಂದಾಯ ವಾರ್ಡ್ ಕಚೇರಿಗಳಲ್ಲಿ ಸಾರ್ವಜನಿಕರು ತಮ್ಮ ಹೆಸರು, ವಿಳಾಸ ಹಾಗೂ ಮತದಾರರ ಪಟ್ಟಿಯಲ್ಲಿನ ಇತರ ವಿವರಗಳನ್ನು ಪರಿಶೀಲಿಸಬಹುದು.

ಅಲ್ಲದೆ, ಅಗತ್ಯವಿರುವ ತಿದ್ದುಪಡಿ, ಹೆಸರು ನೋಂದಣಿ ಸೇರಿದಂತೆ ಎಸ್‌ಐಆರ್‌ಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದು ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಅವಕಾಶವಿದೆ. ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು ಏಳು ಆಟೋರಿಕ್ಷಾಗಳ ಮೂಲಕ ಎರಡು ದಿನಗಳ ಕಾಲ ವ್ಯಾಪಕ ಜಾಗೃತಿ ಪ್ರಚಾರ ನಡೆಸಲಾಗುತ್ತದೆ ಎಂದು ಜಿಬಿಎ ಪ್ರಕಟಣೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande