
ಶ್ರೀರಂಗಪಟ್ಟಣ, 19 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಕಾವೇರಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಿ.ಆರ್.ಕೊಪ್ಪಲು ಗ್ರಾಮದ ಗುಂಜಾ ನರಸಿಂಹಸ್ವಾಮಿ ದೇಗುಲದ ಬಳಿ ನಡೆದಿದೆ.
ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯ ಶವ ನದಿಯಲ್ಲಿ ಪತ್ತೆಯಾಗಿದ್ದು, ಮೃತನ ಎಡಗೈನಲ್ಲಿ ‘ಅನಿತಾ’, ‘ಮಂಗಳ’, ‘ಗೌರಿ’, ‘ನಿಖಿಶ್’ ಹಾಗೂ ಬಲಗೈನಲ್ಲಿ ‘ಲೋಹಿತ್’, ‘ಓಂ’ ಸೇರಿದಂತೆ ಕೆಲವು ಹೆಸರುಗಳನ್ನು ಹಚ್ಚೆ ಹಾಕಲಾಗಿದೆ. ಅಲ್ಲದೆ, ಎದೆಯ ಮೇಲೂ ‘ಮಂಗಳ’ ಎಂಬ ಹೆಸರಿನ ಹಚ್ಚೆ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಹಾಗೂ ವಾರಸುದಾರರ ಪತ್ತೆಗಾಗಿ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಈ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ಪಿಎಸ್ಐ ಕುಮಾರ್ ಮಾತನಾಡಿ, ಮೃತ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ತಿಳಿದಿದ್ದರೆ ಕೂಡಲೇ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ. ಘಟನೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R