ಸುಧಾಮನಗರದಲ್ಲಿ ಭೀಕರ ಅಗ್ನಿ ಅವಘಡ: ನಾಲ್ಕು ಮಹಡಿ ಕಟ್ಟಡ ಬೆಂಕಿಗಾಹುತಿ
ನಾಲ್ಕಂತಸ್ತಿನ ಕಟ್ಟಡ ಬೆಂಕಿಗಾಹುತಿ
bengaluru-sudhama-nagar-four-storey-building-massive-fire-accident


ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ನಗರದ ಲಾಲ್ಬಾಗ್ ಸಮೀಪದ ಸುಧಾಮನಗರದಲ್ಲಿ ತಡ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕಂತಸ್ತಿನ ಕಟ್ಟಡವೊಂದು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಘಟನೆಯಲ್ಲಿ ಕಟ್ಟಡದ ಕೆಳಮಹಡಿಯಲ್ಲಿದ್ದ ಹೆಲ್ಮೆಟ್ ಹಾಗೂ ಮೊಬೈಲ್ ಅಂಗಡಿಗಳಲ್ಲಿನ ವಸ್ತುಗಳು ಸುಟ್ಟು ಕರಕಲಾಗಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಕಟ್ಟಡದಲ್ಲಿದ್ದ ನಿವಾಸಿಗಳು ಹೊರಗೆ ಬಂದಿದ್ದು, ಸಮಯಕ್ಕೆ ಸರಿಯಾಗಿ ಸ್ಥಳಾಂತರಗೊಂಡಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

“ಬೆಂಕಿ ಕಾಣಿಸಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ನಿವಾಸಿಗಳು ಹೊರಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆಯಿದ್ದು, ಪರಿಶೀಲನೆ ಬಳಿಕ ನಿಖರ ಕಾರಣ ತಿಳಿಯಲಿದೆ” ಎಂದು ಸ್ಥಳೀಯ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande