ಧರ್ಮದ ಹೆಸರಿನಲ್ಲಿ ರಾಜಕಾರಣ ಬಿಟ್ಟು ಸಮಾಜ ಸುಧಾರಣೆಗೆ ಆದ್ಯತೆ ನೀಡಿ: ಬಿ.ಕೆ. ಹರಿಪ್ರಸಾದ್
ಬೆಂಗಳೂರು, ಸೆಪ್ಟೆಂಬರ್ 19 (ಹಿ.ಸ.): ಆ್ಯಂಕರ್: ದೇಶದಲ್ಲಿ ಧರ್ಮಾಧಾರಿತ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವ ಬದಲು ಸಮಾಜದ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರ
ಧರ್ಮದ ಹೆಸರಿನಲ್ಲಿ ರಾಜಕಾರಣ ಬಿಟ್ಟು ಸಮಾಜ ಸುಧಾರಣೆಗೆ ಆದ್ಯತೆ ನೀಡಿ: ಬಿ.ಕೆ. ಹರಿಪ್ರಸಾದ್


ಬೆಂಗಳೂರು, ಸೆಪ್ಟೆಂಬರ್ 19 (ಹಿ.ಸ.):

ಆ್ಯಂಕರ್:

ದೇಶದಲ್ಲಿ ಧರ್ಮಾಧಾರಿತ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವ ಬದಲು ಸಮಾಜದ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಕಟ್ಟಡ ನಿರ್ಮಾಣ ಶ್ರಮಿಕರ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. “ತ್ರಿಪಲ್ ತಲಾಕ್ ಕುರಿತು ಪ್ರಧಾನಿ ನಿಲುವನ್ನು ಉಲ್ಲೇಖಿಸಿ ಪರೋಕ್ಷವಾಗಿ ಟೀಕಿಸಿದರು.

ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 12 ವರ್ಷ ಪೂರ್ಣಗೊಳಿಸಿರುವುದನ್ನು ಪ್ರಸ್ತಾಪಿಸಿದ ಹರಿಪ್ರಸಾದ್, ಈ ಅವಧಿಯಲ್ಲಿ ದೇಶದ ಪ್ರಮುಖ ವಿಚಾರಗಳ ಕುರಿತು ಮೋದಿ ಅವರ ನಿಲುವು ಮತ್ತು ಹೇಳಿಕೆಗಳ ಬಗ್ಗೆ ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ಸ್ಥಾಪಿಸಲಾದ ಸಾರ್ವಜನಿಕ ಉದ್ಯಮಗಳ ಕುರಿತು ಪ್ರಸ್ತಾಪಿಸಿದ ಅವರು, ಮೋದಿ ಸರ್ಕಾರದ ಅವಧಿಯಲ್ಲಿ ಹಲವು ಸಾರ್ವಜನಿಕ ಉದ್ಯಮಗಳನ್ನು ಮಾರಾಟ ಮಾಡಲಾಗಿದೆ ಎಂದು ಆರೋಪಿಸಿದರು.

ವಿವಿಧ ಧರ್ಮಗಳ ಜನರು ತಮ್ಮದೇ ಆದ ರೀತಿಯಲ್ಲಿ ದೇವರನ್ನು ಆರಾಧಿಸುತ್ತಾರೆ. ಹೀಗಿರುವಾಗ ಧರ್ಮದ ಹೆಸರಿನಲ್ಲಿ ರಾಜಕಾರಣ ನಡೆಸುವುದರಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದ ಅವರು, “ಧರ್ಮ ರಾಜಕಾರಣ ನಮಗೆ ಅವಶ್ಯಕತೆ ಇಲ್ಲ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande