
ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ನಗರದಲ್ಲಿರುವ ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ಕಟ್ಟಡಗಳ ಸುರಕ್ಷತೆ, ಕಟ್ಟಡ ನಿಯಮಗಳ ಪಾಲನೆ ಹಾಗೂ ವಾಸ ಸಾಮರ್ಥ್ಯವನ್ನು ಸಮಗ್ರವಾಗಿ ಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಅಕ್ರಮ ಹಾಗೂ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳ ಕುರಿತು ನ್ಯಾಯಪೀಠ ಕಳವಳ ವ್ಯಕ್ತಪಡಿಸಿದ್ದು, ಅವುಗಳ ಸ್ಥಿತಿಗತಿ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದೆ.
ಪಿಜಿ ಕಟ್ಟಡಗಳು ಮಂಜೂರಾದ ಕಟ್ಟಡ ನಕ್ಷೆ, ಕಟ್ಟಡ ನಿಯಮಾವಳಿ ಹಾಗೂ ವಲಯ ನಿಯಮಗಳಿಗೆ ಅನುಗುಣವಾಗಿವೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು.
ಜತೆಗೆ, ಕಟ್ಟಡದಲ್ಲಿ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ವಾಸಕ್ಕೆ ಅವಕಾಶ ನೀಡಲಾಗಿದೆಯೇ ಎಂಬುದನ್ನೂ ಪರಿಶೀಲಿಸುವಂತೆ ನ್ಯಾಯಾಲಯ ಸೂಚಿಸಿದೆ.
ಪಿಜಿಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳು, ಸಿಸಿಟಿವಿ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛ ಶೌಚಾಲಯ, 24 ಗಂಟೆ ಭದ್ರತಾ ಸಿಬ್ಬಂದಿ ಹಾಗೂ ಇತರ ಅಗತ್ಯ ಸುರಕ್ಷತಾ ಸೌಲಭ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳಬೇಕಿದೆ.
ವಾಸಿಸುವ ಪ್ರತಿಯೊಬ್ಬರಿಗೂ ಕನಿಷ್ಠ ನಿಗದಿತ ವಿಸ್ತೀರ್ಣ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂಬ ನಿಯಮವೂ ಇದೆ.
ನ್ಯಾಯಪೀಠದ ಸೂಚನೆ: “ಪಿಜಿ ಕಟ್ಟಡಗಳ ನಿರ್ಮಾಣ ಮಂಜೂರಾದ ಯೋಜನೆಗೆ ಅನುಗುಣವಾಗಿದೆಯೇ ಹಾಗೂ ನಿಗದಿತ ವಾಸ ಸಾಮರ್ಥ್ಯ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿ, ಸಮಗ್ರ ವರದಿ ಸಲ್ಲಿಸಬೇಕು” ಎಂದು ಹೈಕೋರ್ಟ್ ಸೂಚಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R