
ಬೆಂಗಳೂರು, 19 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ರಾಜ್ಯ ಸರ್ಕಾರದಲ್ಲಿ ಶೀಘ್ರದಲ್ಲೇ ‘ರಾಜಕೀಯ ವ್ಯವಹಾರಗಳ ಸಮಿತಿ’ ರಚಿಸಲು ಮುಂದಾಗಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ವಾಗತ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ತುಳು ಭಾಷೆಗೆ ಕರ್ನಾಟಕದ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡುವ ಪ್ರಸ್ತಾವಕ್ಕೂ ಅವರು ಬೆಂಬಲ ಸೂಚಿಸಿದ್ದಾರೆ.
ರಾಜ್ಯದ ಮೇಲೆ ಪರಿಣಾಮ ಬೀರುವ ಪ್ರಮುಖ ನೀತಿ ಹಾಗೂ ಆಡಳಿತಾತ್ಮಕ ನಿರ್ಧಾರಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕೈಗೊಳ್ಳುವ ಉದ್ದೇಶದಿಂದ ರಾಜಕೀಯ ವ್ಯವಹಾರಗಳ ಸಮಿತಿ ರಚಿಸಲು ಸರ್ಕಾರ ಮುಂದಾಗಿದೆ.
ಪ್ರಮುಖ ವಿಚಾರಗಳನ್ನು ಸಚಿವ ಸಂಪುಟದ ಮುಂದೆ ತರುವ ಮುನ್ನ ಸಮಿತಿಯಲ್ಲಿ ಚರ್ಚಿಸುವ ವ್ಯವಸ್ಥೆ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ತುಳು ಭಾಷೆಗೆ ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಪ್ರಸ್ತಾವವೂ ಸರ್ಕಾರದ ಪರಿಗಣನೆಯಲ್ಲಿದೆ. ಕರಾವಳಿ ಭಾಗದಲ್ಲಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿದ್ದು, ಈ ಪ್ರಸ್ತಾವಕ್ಕೆ ಬಿ.ಕೆ. ಹರಿಪ್ರಸಾದ್ ಸ್ವಾಗತಿಸಿದ್ದಾರೆ.
“ತುಳು ಭಾಷೆಗೆ ರಾಜ್ಯದಲ್ಲಿ ಸೂಕ್ತ ಸ್ಥಾನಮಾನ ದೊರೆಯಬೇಕು. ತುಳು ಭಾಷೆಯ ಅಧಿಕೃತ ಮಾನ್ಯತೆಯ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ಕ್ರಮ ಸ್ವಾಗತಾರ್ಹ” ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R