
ಮಸ್ಕಿ, 02 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ದಲಿತ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಎರಡನೇ ದಿನವೂ ಅಭೂತಪೂರ್ವ ಜನಬೆಂಬಲ ವ್ಯಕ್ತವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಎರಡನೇ ದಿನದ ಪಾದಯಾತ್ರೆ ಮಸ್ಕಿಯ ಸಂತೆಕೆಲ್ಲೂರಿನಿಂದ ಬುಧವಾರ ಆರಂಭಗೊಂಡಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜು ಗೌಡ, ಶಾಸಕ ಮಾನಪ್ಪ ಡಿ. ವಜ್ಜಲ್, ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ್ ಹಾಗೂ ದೊಡ್ಡನಗೌಡ ಪಾಟೀಲ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.