
ಬಳ್ಳಾರಿ, 02 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಹಳ್ಳಿಗಳಿಗೆ ತಲುಪುತ್ತಿರುವುದು ಶ್ಲಾಘನೀಯ ಎಂದು ಬಳ್ಳಾರಿಯ ಸೈಬರ್ ಕ್ರೈಂ ಇನ್ಸ್ಪೆಕ್ಟರ್ ಶ್ರೀಮತಿ ಗಾಯತ್ರಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕವು ಹಂದಿಹಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ `ದಿ. ಪಟೇಲ ಬಸವರಾಜ ಸ್ಮಾರಕ ದತ್ತಿ ಹಾಗೂ ದಿ. ವೈ. ಲಿಂಗಾರೆಡ್ಡಿ ಮತ್ತು ಪಾರ್ವತಮ್ಮ' ದತ್ತಿ ಉಪನ್ಯಾಸಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಕೇವಲ ನಗರ - ಪಟ್ಟಣಗಳಿಗೆ ಸೀಮಿತಗೊಳ್ಳದೇ ಹಳ್ಳಿಗಳಿಗೆ ತಲುಪಿ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ. ಗ್ರಾಮೀಣ ಪ್ರದೇಶದ ಹೊಸ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯುತ್ತಿರುವುದ ಒಳ್ಳೆಯದ್ದೇ ಎಂದರು.
ವೀರಶೈವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ನೀಲಮ್ಮ ಅವರು, ಕುವೆಂಪು ಮಕ್ಕಳ ಸಾಹಿತ್ಯ ಕುರಿತು ಮಾತನಾಡಿದರು.
ದತ್ತಿ ದಾನಿಗಳೂ, ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾಗಿರುವ ಡಾ. ಅರವಿಂದ ಪಟೇಲ ಅವರು, ದಾನವು ಜ್ಞಾನದಾಸೋಹದ ಮೂಲಕ ಸಾರ್ಥಕ ಗೊಳ್ಳುತ್ತಿರುವುದು ಸ್ವಾಗತಾರ್ಹ. ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಎಲ್ಲರೂ ಮೆಚ್ಚುವಂಥಹವು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ನಿಷ್ಠಿ ರುದ್ರಪ್ಪ, ನಿವೃತ್ತ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನಯ್ಯ ಹಿರೇಮಠ, ಮುಖ್ಯಗುರುಗಳಾದ ಶ್ರೀಮತಿ ಶಶಿರೇಖಾ .ಎಸ್, ಕಸಾಪದ ಜಿಲ್ಲಾ ಸಂಚಾಲಕ ಕಪ್ಪಗಲ್ಲು ಬಿ. ಚಂದ್ರಶೇಖರಚಾರ್, ಕಥೆಗಾರ ವೀರೇಂದ್ರ ರಾವಿಹಾಳ್ ಅವರು ವೇದಿಕೆಯಲ್ಲಿದ್ದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ. ವೆಂಕಟೇಶ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ರಂಗಕಲಾವಿದ ಪುರುಷೋತ್ತಮ ಹಂದ್ಯಾಳು ಅವರಿಗೆ
`ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪುರಸ್ಕಾರ' ಮತ್ತು ನಿವೃತ್ತ ಡಿಡಿಪಿಐ ಮಲ್ಲಿಕಾರ್ಜುನಯ್ಯ ಹಿರೇಮಠ ಅವರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್