ಸೆ.05 ರಂದು ಕೋಳೂರಿನಲ್ಲಿ ಪ್ರಜಾಸೇವಾ ಆಂದೋಲನ ಸಭೆ
ಕುರುಗೋಡು, 02 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಕುರುಗೋಡು ತಾಲೂಕಿನ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕೋಳೂರು ಗ್ರಾಮದಲ್ಲಿ ಸೆಪ್ಟೆಂಬರ್ 05 ರಂದು ‘ಪ್ರಜಾಸೇವಾ ಆಂದೋಲನ'' ಸಭೆಯನ್ನು ಆಯೋಜಿಸಲಾಗಿದೆ. ಕೋಳೂರು ಹೋಬಳಿ ವ್ಯಾಪ್ತಿಯ ಕೋಳೂರು ಗ್ರಾಮ
ಸೆ.05 ರಂದು ಕೋಳೂರಿನಲ್ಲಿ ಪ್ರಜಾಸೇವಾ ಆಂದೋಲನ ಸಭೆ


ಕುರುಗೋಡು, 02 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಕುರುಗೋಡು ತಾಲೂಕಿನ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕೋಳೂರು ಗ್ರಾಮದಲ್ಲಿ ಸೆಪ್ಟೆಂಬರ್ 05 ರಂದು ‘ಪ್ರಜಾಸೇವಾ ಆಂದೋಲನ' ಸಭೆಯನ್ನು ಆಯೋಜಿಸಲಾಗಿದೆ.

ಕೋಳೂರು ಹೋಬಳಿ ವ್ಯಾಪ್ತಿಯ ಕೋಳೂರು ಗ್ರಾಮದ ಅಗಸೆಕಟ್ಟೆ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದೆ.

ಜನರ ಸಮಸ್ಯೆಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದ್ದು, ಪ್ರತಿ ತಿಂಗಳ ಶನಿವಾರದಂದು ರಾಜ್ಯಾದ್ಯಂತ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯುತ್ತಿವೆ.

ಕುರುಗೋಡು ತಾಲೂಕಿನ ಸಮಸ್ತ ನಾಗರಿಕರು ತಮ್ಮ ಸಮಸ್ಯೆ, ಕುಂದುಕೊರತೆಗಳ ಅಹವಾಲುಗಳೊಂದಿಗೆ ಈ ಸಭೆಯಲ್ಲಿ ಭಾಗವಹಿಸಿ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕುರುಗೋಡು ತಾಲೂಕು ತಹಶೀಲ್ದಾರ ನರಸಪ್ಪ ಅವರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande