ಬಳ್ಳಾರಿ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್–ಬಿಜೆಪಿ ನಾಯಕರ ವಾಕ್ಸಮರ
ಬಳ್ಳಾರಿ, 02 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ವಿರುದ್ಧ ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ವಾಗ್ದಾಳಿ ನಡೆಸಿದ್ದು, ತಮ್ಮ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ತಮ್ಮ ತಾಯಿಯ ಹೆಸರನ್ನು ನಾಮಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಳ್ಳಾರಿ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್–ಬಿಜೆಪಿ ನಾಯಕರ ವಾಕ್ಸಮರ


ಬಳ್ಳಾರಿ, 02 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ವಿರುದ್ಧ ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ವಾಗ್ದಾಳಿ ನಡೆಸಿದ್ದು, ತಮ್ಮ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ತಮ್ಮ ತಾಯಿಯ ಹೆಸರನ್ನು ನಾಮಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಕಾಮಗಾರಿಗಳಿಗೂ ‘ಸುವರ್ಣ ಬಳ್ಳಾರಿ’ ಎಂದು ಹೆಸರಿಡುತ್ತಿರುವುದು ಸರಿಯಲ್ಲ ಎಂದರು. ಜಿ. ಜನಾರ್ಧನರೆಡ್ಡಿ ಜೈಲು ಪಾಲಾಗಿದ್ದ ವಿಚಾರ ಪ್ರಸ್ತಾಪಿಸುವ ಮೊದಲು ನಾರಾ ಭರತರೆಡ್ಡಿ ಅವರು ತಮ್ಮ ಕುಟುಂಬದ ಹಿನ್ನೆಲೆ ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಬಳ್ಳಾರಿಯಲ್ಲಿ ಗಾಂಜಾ, ಮಾದಕ ವಸ್ತುಗಳ ಮಾರಾಟ, ಓಸಿ ಹಾಗೂ ಅಕ್ರಮ ಮರಳು ಸಾಗಣೆ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಗುತ್ತಿಗೆ ಕಾಮಗಾರಿಗಳಲ್ಲೂ ರಾಜಕೀಯ ಹಸ್ತಕ್ಷೇಪವಿದ್ದು, ಗುತ್ತಿಗೆದಾರರು ಕಾಮಗಾರಿ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಣವನ್ನು ಲೋಕಸಭೆ ಚುನಾವಣೆಗೆ ಬಳಸಲಾಗಿದೆ ಎಂಬ ಜಿ. ಜನಾರ್ಧನರೆಡ್ಡಿ ಅವರ ಆರೋಪವನ್ನು ಪ್ರಸ್ತಾಪಿಸಿದ ಅವರು, ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಜನರಿಗೆ ತಿಳಿದಿವೆ ಎಂದರು.

ನಾರಾ ಭರತರೆಡ್ಡಿ ಅವರನ್ನು ‘ಒನ್ ಟೈಂ ಶಾಸಕ’ ಎಂದು ಟೀಕಿಸಿದ ಸೋಮಶೇಖರರೆಡ್ಡಿ, ಕಾಂಗ್ರೆಸ್–ಬಿಜೆಪಿ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವುದನ್ನು ಬಿಟ್ಟು ಬಳ್ಳಾರಿ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಸಲಹೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande