
ಬೆಂಗಳೂರು, 02ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಮಹಿಳಾ ಉದ್ಯಮಿಗಳ ಸಂಘಗಳ ಒಕ್ಕೂಟವಾದ 'ಉಬುಂತು' ವತಿಯಿಂದ ಬೆಂಗಳೂರಿನ ಎಫ್ಕೆಸಿಸಿಐ (FKCCI) ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ‘ಟುಗೆದರ್ ವಿ ಗ್ರೋ’ ಅಂತರರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನಾಚರಣೆಯ 5ನೇ ಆವೃತ್ತಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಮಹಿಳಾ ಉದ್ಯಮಶೀಲತೆಯ ಪ್ರಾಮುಖ್ಯತೆ ಹಾಗೂ ಆರ್ಥಿಕ ಸ್ವಾವಲಂಬನೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಉದ್ಯಮ ರಂಗದಲ್ಲಿ ಮಹಿಳೆಯರು ಸಾಧಿಸುತ್ತಿರುವ ಮುನ್ನಡೆಯನ್ನು ಶ್ಲಾಘಿಸಲಾಯಿತು.
ಈ ಸಮಾರಂಭದಲ್ಲಿ ಉಬುಂತು ಸಂಸ್ಥಾಪಕ ಅಧ್ಯಕ್ಷೆ ಕೆ. ರತ್ನಾಪ್ರಭಾ, ಸಹ ಸಂಸ್ಥಾಪಕಿ ಹಾಗೂ ಎಫ್ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ, ಜ್ಯೋತಿ ಬಾಲಕೃಷ್ಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಇವರೊಂದಿಗೆ ಅತಿಥಿಗಳಾದ ಮರ್ಸಿ ಎಪಾವ್, ಮಿಕಿಕೋ ಟನಕ, ಮನೋಜ್ ಕೃಷ್ಣಪ್ಪ, ನಿಂಗಣ್ಣ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R