ಪೊಲೀಸ್ ಠಾಣೆ ಮುಂಭಾಗ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ
ಐಷಾರಾಮಿ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ
Bengaluru-Man-Found-Dead-In-Luxury-Car-Near-Police-Station


ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ನಗರದ ಕೋರಮಂಗಲ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸೆ.20ರಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ರಾತ್ರಿ ಸುಮಾರು 1 ಗಂಟೆ ವೇಳೆಗೆ ಪೊಲೀಸ್ ಠಾಣೆಯ ಮುಂಭಾಗದ ಫಾಸ್ಟ್ಫುಡ್ ಹೋಟೆಲ್ ಬಳಿ ಕಾರನ್ನು ನಿಲ್ಲಿಸಲಾಗಿತ್ತು ಎನ್ನಲಾಗಿದೆ. ಬೆಳಿಗ್ಗೆ ಕಾರಿನಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ಗಮನಕ್ಕೆ ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಪೊಲೀಸರ ಪರಿಶೀಲನೆಯ ವೇಳೆ ಮೃತ ವ್ಯಕ್ತಿಯನ್ನು ಅಕ್ಬರ್ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಸಾವಿನ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಹಾಗೂ ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಮೃತ ಅಕ್ಬರ್ ಅವರ ಹಿನ್ನೆಲೆ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಪೊಲೀಸರ ತನಿಖೆ ಪೂರ್ಣಗೊಂಡ ಬಳಿಕವೇ ಸಾವಿನ ನಿಖರ ಕಾರಣ ಸ್ಪಷ್ಟವಾಗಲಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande