ಯಲಹಂಕ, ಹೆಬ್ಬಾಳದಲ್ಲಿ ₹150 ಕೋಟಿ ವೆಚ್ಚದಲ್ಲಿ ಎರಡು ಆಸ್ಪತ್ರೆಗಳಿಗೆ ಶಂಕುಸ್ಥಾಪನೆ
₹150 ಕೋಟಿ ವೆಚ್ಚದಲ್ಲಿ ಎರಡು ಆಸ್ಪತ್ರೆಗಳಿಗೆ ಶಂಕುಸ್ಥಾಪನೆ
Bengaluru-Yelahanka-Hebbal-150-crore-two-125-bed-hospitals-foundation-stone-laid


ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಬೆಳ್ಳಹಳ್ಳಿ ಹಾಗೂ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಪಶುಸಂಗೋಪನೆ ಮತ್ತು ಕೃಷಿ ಇಲಾಖೆ ಆವರಣದಲ್ಲಿ ತಲಾ ₹75 ಕೋಟಿ ಅಂದಾಜು ವೆಚ್ಚದಲ್ಲಿ 125 ಹಾಸಿಗೆಗಳ ಸಾಮರ್ಥ್ಯದ ಎರಡು ಅತ್ಯಾಧುನಿಕ ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕೆ ಭಾನುವಾರ ಗುದ್ದಲಿಪೂಜೆ ನೆರವೇರಿಸಲಾಯಿತು.

ಸಚಿವರಾದ ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಎರಡೂ ಆಸ್ಪತ್ರೆಗಳು ಆಧುನಿಕ ಸೌಲಭ್ಯಗಳನ್ನು ಒಳಗೊಂಡಂತೆ ನಿರ್ಮಾಣವಾಗಲಿದ್ದು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶ ಹೊಂದಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಆಸ್ಪತ್ರೆಗಳ ನಿರ್ಮಾಣದಿಂದ ಈ ಭಾಗದ ಜನರಿಗೆ ಸುಸಜ್ಜಿತ ಆರೋಗ್ಯ ಸೇವೆಗಳು ಸ್ಥಳೀಯವಾಗಿಯೇ ದೊರೆಯಲಿದ್ದು, ಆರೋಗ್ಯ ಮೂಲಸೌಕರ್ಯ ಮತ್ತಷ್ಟು ಬಲಪಡಿಸಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande