
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ರಾಜ್ಯದಾದ್ಯಂತ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ.
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಹಾಗೂ ವಿಶೇಷವಾಗಿ ಪೂರ್ವ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.