ಕಲಬುರಗಿ–ಅಫಜಲಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರಿ ಅನಾಹುತ
ಕಲಬುರಗಿ, 20 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ನಾಗರಹಾವು ರಸ್ತೆ ದಾಟುತ್ತಿದ್ದ ಹಿನ್ನೆಲೆಯಲ್ಲಿ ಏಕಾಏಕಿ ನಿಧಾನಗೊಳಿಸಿದ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಬಂದ ಇನೋವಾ ಕಾರು ಡಿಕ್ಕಿ ಹೊಡೆದ ಘಟನೆ ಕಲಬುರಗಿ–ಅಫಜಲಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನಾಗರಹಾವು ರಸ್ತೆ ದಾಟುತ್ತಿದ್ದುದನ್ನು ಕಂ
Kalaburagi-Afzalpur-highway-Innova-car-crashes-into-goods-vehicle-averting-major-tragedy


ಕಲಬುರಗಿ, 20 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ನಾಗರಹಾವು ರಸ್ತೆ ದಾಟುತ್ತಿದ್ದ ಹಿನ್ನೆಲೆಯಲ್ಲಿ ಏಕಾಏಕಿ ನಿಧಾನಗೊಳಿಸಿದ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಬಂದ ಇನೋವಾ ಕಾರು ಡಿಕ್ಕಿ ಹೊಡೆದ ಘಟನೆ ಕಲಬುರಗಿ–ಅಫಜಲಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ನಾಗರಹಾವು ರಸ್ತೆ ದಾಟುತ್ತಿದ್ದುದನ್ನು ಕಂಡ ಗೂಡ್ಸ್ ವಾಹನದ ಚಾಲಕ ಏಕಾಏಕಿ ವಾಹನದ ವೇಗವನ್ನು ಕಡಿಮೆ ಮಾಡಿದ್ದಾರೆ ಎನ್ನಲಾಗಿದೆ.

ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನ ರಸ್ತೆ ಬದಿಗೆ ಉರುಳಿ ಬಿದ್ದಿದೆ.

ಅಪಘಾತಕ್ಕೀಡಾದ ಇನೋವಾ ಕಾರಿನ ನೋಂದಣಿ ಸಂಖ್ಯೆ KA-11-C-2476 ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದವರು ಹೈದರಾಬಾದ್ನಿಂದ ವಿಜಯಪುರದತ್ತ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಗೂಡ್ಸ್ ವಾಹನ ನಿಧಾನಗೊಳಿಸಿದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಇನೋವಾ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ವಾಹನ ರಸ್ತೆ ಬದಿಗೆ ಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande