ಮೆರವಣಿಗೆಯಲ್ಲಿ ಡೊಳ್ಳು ಬಾರಿಸಿ ಸಂಭ್ರಮಿಸಿದ ಸಮ್ಮೇಳನದ ಸರ್ವಾಧ್ಯಕ್ಷ ಪ್ರಕಾಶ ವಸ್ತ್ರದ
ಬಾಗಲಕೋಟೆ, 20 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಇಂದು ನಡೆಯುತ್ತಿರುವ ಕವಿ-ಕಾವ್ಯ ಸಮ್ಮೇಳನ ಹಾಗೂ ರತ್ನ ಸನ್ಮಾನ ಸಮಾರಂಭದ ಅಂಗವಾಗಿ ಸಮ್ಮೇಳನದ ಸರ್ವಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಿತು. ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಸಾಹಿತ್ಯಾಸಕ್ತರು,
ಡೊಳ್ಳು


ಬಾಗಲಕೋಟೆ, 20 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಇಂದು ನಡೆಯುತ್ತಿರುವ ಕವಿ-ಕಾವ್ಯ ಸಮ್ಮೇಳನ ಹಾಗೂ ರತ್ನ ಸನ್ಮಾನ ಸಮಾರಂಭದ ಅಂಗವಾಗಿ ಸಮ್ಮೇಳನದ ಸರ್ವಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಿತು. ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಸಾಹಿತ್ಯಾಸಕ್ತರು, ಕವಿಗಳು, ಸಾಹಿತಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡು ಸಂಭ್ರಮಿಸಿದರು.

ಸಮ್ಮೇಳನದ ಸರ್ವಾಧ್ಯಕ್ಷರಾದ ಹಿರಿಯ ನ್ಯಾಯವಾದಿ ಹಾಗೂ ಸಾಹಿತಿ ಪ್ರಕಾಶ ವಸ್ತ್ರದ ಅವರು ಮೆರವಣಿಗೆಯಲ್ಲಿ ವಿಶೇಷವಾಗಿ ಗಮನ ಸೆಳೆದರು. ಮೆರವಣಿಗೆಯ ವೇಳೆ ಡೊಳ್ಳಿನ ನಾದಕ್ಕೆ ಉತ್ಸಾಹಗೊಂಡ ಅವರು ಸ್ವತಃ ಡೊಳ್ಳು ಬಾರಿಸಿ ಸಂಭ್ರಮಿಸಿದರು. ಸಾಹಿತ್ಯದ ಜೊತೆಗೆ ಜನಪದ ಕಲೆ ಮತ್ತು ಸಂಸ್ಕೃತಿಯ ಮೇಲಿನ ತಮ್ಮ ಅಭಿಮಾನವನ್ನು ಈ ಮೂಲಕ ವ್ಯಕ್ತಪಡಿಸಿದರು.

ಪ್ರಕಾಶ ವಸ್ತ್ರದ ಅವರು ಡೊಳ್ಳು ಬಾರಿಸುತ್ತಿದ್ದ ದೃಶ್ಯ ಮೆರವಣಿಗೆಯಲ್ಲಿ ನೆರೆದಿದ್ದ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಲ್ಲಿ ವಿಶೇಷ ಉತ್ಸಾಹ ಮೂಡಿಸಿತು. ಮೆರವಣಿಗೆಯುದ್ದಕ್ಕೂ ಕನ್ನಡ ಸಾಹಿತ್ಯ, ಕಾವ್ಯ ಹಾಗೂ ಜನಪದ ಸಂಸ್ಕೃತಿಯ ಘೋಷಣೆಗಳು ಮೊಳಗಿದವು. ಸಾಂಪ್ರದಾಯಿಕ ಕಲಾ ಪ್ರಕಾರಗಳೊಂದಿಗೆ ಸಾಹಿತ್ಯದ ಸಮ್ಮೇಳನವನ್ನು ಆಚರಿಸುವ ಮೂಲಕ ಕಾರ್ಯಕ್ರಮಕ್ಕೆ ವಿಭಿನ್ನ ಮೆರುಗು ದೊರೆಯಿತು.

ಕವಿ-ಕಾವ್ಯ ಸಮ್ಮೇಳನದ ಅಂಗವಾಗಿ ನಡೆದ ಈ ಮೆರವಣಿಗೆ ಮುಧೋಳ ನಗರದ ಸಾಹಿತ್ಯ ಮತ್ತು ಸಾಂಸ್ಕೃತಿಕ ವಾತಾವರಣಕ್ಕೆ ಮತ್ತಷ್ಟು ಕಳೆ ತಂದಿತು. ಕವಿಗಳು, ಸಾಹಿತಿಗಳು ಹಾಗೂ ಸಾಹಿತ್ಯಾಭಿಮಾನಿಗಳು ಒಂದೆಡೆ ಸೇರಿ ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಕುರಿತು ಅಭಿಮಾನ ವ್ಯಕ್ತಪಡಿಸಿದರು.

ಈ ಕುರಿತು ರನ್ನ ಪ್ರತಿಷ್ಠಾನದ ಸದಸ್ಯ ಕೆ.ಎಲ್. ಉದುಪುಡಿ ಮಾತನಾಡಿ, ಸಮ್ಮೇಳನದ ಸರ್ವಾಧ್ಯಕ್ಷರಾದ ಪ್ರಕಾಶ ವಸ್ತ್ರದ ಅವರು ಮೆರವಣಿಗೆಯಲ್ಲಿ ಸ್ವತಃ ಡೊಳ್ಳು ಬಾರಿಸಿ ಸಂಭ್ರಮಿಸಿದ್ದು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಯಿತು ಎಂದು ತಿಳಿಸಿದರು.

ಸಾಹಿತ್ಯ ಸಮ್ಮೇಳನಗಳು ಕೇವಲ ವೇದಿಕೆ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಸ್ಥಳೀಯ ಕಲೆ, ಸಂಸ್ಕೃತಿ ಹಾಗೂ ಜನಪದ ಪರಂಪರೆಯನ್ನು ಒಳಗೊಂಡಾಗ ಜನರೊಂದಿಗೆ ಇನ್ನಷ್ಟು ನಿಕಟ ಸಂಬಂಧ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಸಮ್ಮೇಳನದ ಹಿನ್ನೆಲೆಯಲ್ಲಿ ಮುಧೋಳ ನಗರದಲ್ಲಿ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಕವಿ-ಕಾವ್ಯ ಸಮ್ಮೇಳನದ ವಿವಿಧ ಕಾರ್ಯಕ್ರಮಗಳಲ್ಲಿ ಸಾಹಿತ್ಯಾಸಕ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande