ಮತದಾರರ ಪಟ್ಟಿ ಪರಿಷ್ಕರಣೆ: ಜಯನಗರದಲ್ಲಿ ಡೊಳ್ಳುಕುಣಿತದ ಮೂಲಕ ಜಾಗೃತಿ ಅಭಿಯಾನ
ಜಯನಗರದಲ್ಲಿ ಡೊಳ್ಳುಕುಣಿತದ ಮೂಲಕ ಜಾಗೃತಿ ಅಭಿಯಾನ
VOTER-LIST-REVISION-AWARENESS-CAMPAIGN-IN-JAYANAGAR-THROUGH-DOLLUKUNITHA


ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ–2026ರ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯನಗರದಲ್ಲಿ ಡೊಳ್ಳುಕುಣಿತದ ಮೂಲಕ ಸಾರ್ವಜನಿಕರಲ್ಲಿ ಮತದಾರರ ಪಟ್ಟಿ ಕುರಿತು ಜಾಗೃತಿ ಮೂಡಿಸಲಾಯಿತು.

ಜಾಗೃತಿ ಅಭಿಯಾನದ ವೇಳೆ ಕಲಾವಿದರು ಡೊಳ್ಳುಕುಣಿತ ಪ್ರದರ್ಶಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಹೆಸರು ಅಥವಾ ವಿಳಾಸದಲ್ಲಿರುವ ತಪ್ಪುಗಳ ತಿದ್ದುಪಡಿ ಹಾಗೂ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

18 ವರ್ಷ ಪೂರ್ಣಗೊಂಡಿರುವ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು. ಈಗಾಗಲೇ ಪಟ್ಟಿಯಲ್ಲಿ ಹೆಸರು ಇರುವವರು ತಮ್ಮ ಹೆಸರು, ವಿಳಾಸ ಸೇರಿದಂತೆ ವಿವರಗಳನ್ನು ಪರಿಶೀಲಿಸಿಕೊಂಡು, ಅಗತ್ಯವಿದ್ದರೆ ತಿದ್ದುಪಡಿ ಮಾಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಯಿತು. ಬೆಂಗಳೂರಿನ ದಕ್ಷಿಣ ಜಿಲ್ಲಾಡಳಿತದ ಎಸ್ಐಆರ್–2026 ಪ್ರಕ್ರಿಯೆಯಡಿ ಮತದಾರರ ಸೌಲಭ್ಯ ಕೇಂದ್ರಗಳು ಹಾಗೂ ಬಿಎಲ್ಒ ಕೇಂದ್ರಗಳ ಮಾಹಿತಿಯನ್ನೂ ಪ್ರಕಟಿಸಲಾಗಿದೆ.

“ಮತದಾರರ ಪಟ್ಟಿಯಲ್ಲಿರುವ ವಿವರಗಳನ್ನು ಪ್ರತಿಯೊಬ್ಬರೂ ಪರಿಶೀಲಿಸಿಕೊಳ್ಳಬೇಕು. ಅರ್ಹರು ನೋಂದಣಿಯಿಂದ ಹೊರಗುಳಿಯದಂತೆ ವಿಶೇಷ ಜಾಗೃತಿ ಅಭಿಯಾನಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ,” ಎಂದು ಅಧಿಕಾರಿಗಳು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande