

ಬಳ್ಳಾರಿ, 21 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ‘ಆರೋಗ್ಯಕರ ನಾಳೆಗಳಿಗಾಗಿ ಆಯುರ್ವೇದ’ ಘೋಷವಾಕ್ಯದೊಂದಿಗೆ ಸೆ.23 ರಂದು ಬೆಳಿಗ್ಗೆ 09.30 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಳ್ಳಾರಿ ಸಂಸದ ಈ. ತುಕಾರಾಮ್, ಕೊಪ್ಪಳ ಸಂಸದ ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತದ ಅಧ್ಯಕ್ಷ ಆದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಶಾಸಕರಾದ ಬಿ.ಎಂ. ನಾಗರಾಜ, ಬಿ. ನಾಗೇಂದ್ರ, ಈ. ಅನ್ನಪೂರ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ, ಡಾ. ಶಶೀಲ್ ಜಿ. ನಮೋಶಿ, ಡಾ. ವೈ. ಎಂ. ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ, ಬುಡಾ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾಪೆರ್Çರೇಷನ್ ಲಿಮಿಟೆಡ್ನ ಉಪಾಧ್ಯಕ್ಷ ಹೆಚ್. ಲಕ್ಷ್ಮಣ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಭಾಗವಹಿಸಲಿದ್ದಾರೆ.
ಆಯುಷ್ ಇಲಾಖೆಯ ಆಯುಕ್ತರಾದ ಡಾ.ಸುನೀಲ್ ಪನ್ವರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ್ ಪಿ.ಎಸ್ ಮತ್ತು ಜಿಲ್ಲಾ ಆಯುಷ್ ಇಲಾಖೆಯ ಜಿಲ್ಲಾ ಆಯುಷ್ ಅಧಿಕಾರಿ ಡಾ.ಟಿ. ಫಣೀಂಧರ ಸೇರಿದಂತೆ ಬಳ್ಳಾರಿ ಜಿಲ್ಲೆಯ ವಿವಿಧ ಯೋಗ ಸಂಘ-ಸಂಸ್ಥೆಗಳು ಮತ್ತು ಆಯುಷ್ ಸಂಘಟನೆಗಳು ಹಾಗೂ ಇನ್ನೀತರರು ಉಪಸ್ಥಿತರಿರುವರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್