
ವಿಜಯಪುರ, 21 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪುರಸಭೆ ಹಾಗೂ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ-4 ಯೋಜನೆಯಡಿ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಾಲ್ಮೀಕಿ ಸಮುದಾಯ ಭವನವನ್ನು ಶಾಸಕ ಶಿವಾನಂದ ಪಾಟೀಲ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶಿವಾನಂದ ಪಾಟೀಲ ಅವರು, ಬಸವನಬಾಗೇವಾಡಿ ಕ್ಷೇತ್ರದ ಅಭಿವೃದ್ಧಿಯ ಪಯಣದಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಈ ಸಮುದಾಯ ಭವನ ನಿರ್ಮಾಣಗೊಂಡಿದೆ ಎಂದು ತಿಳಿಸಿದರು. ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಮೂಲಕ ಕ್ಷೇತ್ರದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.
ನೂತನವಾಗಿ ನಿರ್ಮಿಸಲಾಗಿರುವ ವಾಲ್ಮೀಕಿ ಸಮುದಾಯ ಭವನವು ಸಮುದಾಯದ ಬಾಂಧವರ ಸಾಮಾಜಿಕ, ಸಾಂಸ್ಕೃತಿಕ ಹಾಗೂ ವಿವಿಧ ಸಮುದಾಯ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ಸಭೆ-ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಮುದಾಯದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಈ ಭವನವು ಉತ್ತಮ ವೇದಿಕೆಯಾಗಲಿದೆ ಎಂಬ ವಿಶ್ವಾಸವನ್ನು ಶಾಸಕ ಶಿವಾನಂದ ಪಾಟೀಲ ವ್ಯಕ್ತಪಡಿಸಿದರು.
ಬಸವನಬಾಗೇವಾಡಿ ಪುರಸಭೆ ಹಾಗೂ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ-4 ಯೋಜನೆಯಡಿ ಕೈಗೊಂಡಿರುವ ಈ ಕಾಮಗಾರಿಯಿಂದ ಸಾರ್ವಜನಿಕರಿಗೆ ಮತ್ತೊಂದು ಅಗತ್ಯ ಸೌಲಭ್ಯ ದೊರೆತಂತಾಗಿದೆ. ಸಮುದಾಯದ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿ, ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯಗಳ ಕಲ್ಪನೆ ಹಾಗೂ ವಿವಿಧ ಸಮುದಾಯಗಳ ಸಾಮಾಜಿಕ ಚಟುವಟಿಕೆಗಳಿಗೆ ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಮುಂದೆಯೂ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಶಿವಾನಂದ ಪಾಟೀಲ ತಿಳಿಸಿದರು.
ಬಸವನಬಾಗೇವಾಡಿಯ ಸಮಗ್ರ ಅಭಿವೃದ್ಧಿಗಾಗಿ ಕೈಗೊಳ್ಳುತ್ತಿರುವ ಪ್ರತಿಯೊಂದು ಹೆಜ್ಜೆಯಲ್ಲೂ ಬೆಂಬಲವಾಗಿ ನಿಂತಿರುವ ಕ್ಷೇತ್ರದ ಜನತೆ ಹಾಗೂ ಸಮಸ್ತ ಬಾಂಧವರಿಗೆ ಶಾಸಕ ಶಿವಾನಂದ ಪಾಟೀಲ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande