ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಚುರುಕು ನೀಡಲು ಸಂಸದ ಜಿಗಜಿಣಗಿ ಸೂಚನೆ
ವಿಜಯಪುರ, 21 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 2026-27ನೇ ಸಾಲಿನ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ 2ನೇ ತ್ರೈಮಾಸಿಕದ ಪ್ರಗತಿ ಪರಿಶೀಲನಾ ಸಭೆ ವಿಜಯಪುರ ಲೋಕಸಭಾ ಸದಸ್ಯ ರಮೇಶ ಜಿಗಜಿಣಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲೆಯಾದ್ಯಂತ ಕ
ಸಭೆ


ವಿಜಯಪುರ, 21 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 2026-27ನೇ ಸಾಲಿನ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ 2ನೇ ತ್ರೈಮಾಸಿಕದ ಪ್ರಗತಿ ಪರಿಶೀಲನಾ ಸಭೆ ವಿಜಯಪುರ ಲೋಕಸಭಾ ಸದಸ್ಯ ರಮೇಶ ಜಿಗಜಿಣಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲೆಯಾದ್ಯಂತ ಕೇಂದ್ರ ಸರ್ಕಾರದ ಅನುದಾನ ಹಾಗೂ ಮಾರ್ಗಸೂಚಿಗಳಡಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಜನಪರ ಮತ್ತು ಅಭಿವೃದ್ಧಿ ಯೋಜನೆಗಳ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ, ಪ್ರಗತಿ, ಫಲಾನುಭವಿಗಳ ಸಂಖ್ಯೆ, ಕಾಮಗಾರಿಗಳ ಹಂತ ಹಾಗೂ ಎದುರಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು.

ಸಭೆಯಲ್ಲಿ ವಿಶೇಷವಾಗಿ ಜಿಲ್ಲೆಯ ಬರಗಾಲ ಪರಿಸ್ಥಿತಿ ಸೇರಿದಂತೆ ಜನಸಾಮಾನ್ಯರಿಗೆ ನೇರವಾಗಿ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಿತು. ಬರಗಾಲದ ಸಂದರ್ಭದಲ್ಲಿ ರೈತರು ಹಾಗೂ ಗ್ರಾಮೀಣ ಜನತೆಗೆ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಸಮರ್ಪಕವಾಗಿ ತಲುಪಿಸುವುದು, ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಸೌಲಭ್ಯ ಒದಗಿಸುವುದು ಹಾಗೂ ಯಾವುದೇ ಕಾರಣಕ್ಕೂ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚಿಸಿದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಕೇವಲ ಕಾಗದದ ಮೇಲಿನ ಪ್ರಗತಿಗೆ ಸೀಮಿತವಾಗದೆ, ಅವುಗಳ ನೈಜ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಪರಿಹರಿಸಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಬರಗಾಲ ಸೇರಿದಂತೆ ಪ್ರಸ್ತುತ ಎದುರಾಗಿರುವ ವಿವಿಧ ಸವಾಲುಗಳ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮೀಣ ಪ್ರದೇಶಗಳ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಕೇಂದ್ರ ಸರ್ಕಾರದ ಯೋಜನೆಗಳಡಿ ಮಂಜೂರಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಇದೇ ವೇಳೆ ಯೋಜನೆಗಳ ಪ್ರಗತಿಯಲ್ಲಿ ಹಿಂದುಳಿದಿರುವ ಇಲಾಖೆಗಳು ತಮ್ಮ ಕಾರ್ಯವೈಖರಿಯನ್ನು ಪರಿಶೀಲಿಸಿಕೊಂಡು ವೇಗ ಹೆಚ್ಚಿಸಬೇಕು. ಅಧಿಕಾರಿಗಳು ತಮ್ಮ ವ್ಯಾಪ್ತಿಯ ಯೋಜನೆಗಳ ಅನುಷ್ಠಾನದ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ನಡೆಸಿ, ಪ್ರಗತಿ ವರದಿಗಳನ್ನು ಸಮರ್ಪಕವಾಗಿ ಸಲ್ಲಿಸಬೇಕು ಎಂದು ಸಂಸದರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಸೇರಿದಂತೆ ಜಿಲ್ಲಾ ಪಂಚಾಯಿತಿಯ ಹಿರಿಯ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು.

ಡಿಐಎಸ್ಎಚ್ಎ ಸಭೆಯ ಮೂಲಕ ಜಿಲ್ಲೆಯ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದ ಮೇಲೆ ನಿಗಾ ವಹಿಸಲಾಗಿದ್ದು, ಮುಂದಿನ ದಿನಗಳಲ್ಲಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಜನರಿಗೆ ಸೌಲಭ್ಯಗಳು ತ್ವರಿತವಾಗಿ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande