ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ₹28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ
₹28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ
BENGALURU AIRPORT CUSTOMS SEIZES RS-28 CRORE HYDROPONIC CANNABIS AND RS-1.75 CRORE GOLD JEWELLERY


ದೇವನಹಳ್ಳಿ, 22 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ₹28 ಕೋಟಿ ಮೌಲ್ಯದ 80.11 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಹಾಗೂ ₹1.75 ಕೋಟಿ ಮೌಲ್ಯದ 1.2 ಕೆ.ಜಿ. ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.

ಪ್ರತ್ಯೇಕ ಪ್ರಕರಣಗಳಲ್ಲಿ ಆರು ಪ್ರಯಾಣಿಕರನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ.

ವಿಯೆಟ್ನಾಂ ಹಾಗೂ ಬ್ಯಾಂಕಾಕ್ನಿಂದ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕರ ಲಗೇಜ್ಗಳಲ್ಲಿ ಅಡಗಿಸಿಟ್ಟಿದ್ದ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಒಟ್ಟು ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಐವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

₹1.75 ಕೋಟಿ ಚಿನ್ನಾಭರಣ ವಶಮತ್ತೊಂದು ಕಾರ್ಯಾಚರಣೆಯಲ್ಲಿ ಅಬುದಾಬಿ ಹಾಗೂ ಕೌಲಾಲಂಪುರದಿಂದ ಕೆಐಎಗೆ ಆಗಮಿಸಿದ್ದ ಪ್ರಯಾಣಿಕರಿಂದ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ₹1.75 ಕೋಟಿ ಮೌಲ್ಯದ 1.2 ಕೆ.ಜಿ. ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಪ್ರಯಾಣಿಕನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ತಿಂಗಳಿಂದ ವಿದೇಶಗಳಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಹೈಡ್ರೋಪೋನಿಕ್ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳು ಹಾಗೂ ವನ್ಯಜೀವಿಗಳನ್ನು ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande