ಕೆಪಿಎಸ್ಸಿ ಮುಚ್ಚುವ ಬಗ್ಗೆ ತಜ್ಞರೊಂದಿಗೆ ಚರ್ಚೆ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್
ಬೆಂಗಳೂರು, 22 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಹಗರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಾನೂನು ಚೌಕಟ್ಟಿನೊಳಗೆ ಕೆಪಿಎಸ್‌ಸಿಯನ್ನು ಮುಚ್ಚುವ ಸಾಧ್ಯತೆ ಕುರಿತು ತಜ್ಞರೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್


ಬೆಂಗಳೂರು, 22 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಹಗರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಾನೂನು ಚೌಕಟ್ಟಿನೊಳಗೆ ಕೆಪಿಎಸ್‌ಸಿಯನ್ನು ಮುಚ್ಚುವ ಸಾಧ್ಯತೆ ಕುರಿತು ತಜ್ಞರೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಕಿಯೋನಿಕ್ಸ್‌ನ 50ನೇ ಸಂಸ್ಥಾಪನಾ ದಿನಾಚರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಎಸ್‌ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಂಬಿಕೆ ಇಟ್ಟು ಆಯ್ಕೆ ಮಾಡಿದ ಅಧಿಕಾರಿಗಳೇ ಈ ರೀತಿಯ ಕೃತ್ಯಗಳಲ್ಲಿ ತೊಡಗಿರುವುದು ಬೇಸರದ ಸಂಗತಿ. ಅಲ್ಲಿರುವ ಕೆಲ ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ ಎಂದು ಆರೋಪಿಸಿದರು.

ಈ ಕುರಿತು ರಾಜ್ಯ ಪೊಲೀಸ್ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಒಂದು ದಿನ ಎಲ್ಲವೂ ಹೊರಗೆ ಬರಲಿದೆ ಎಂದು ಅವರು ಹೇಳಿದರು.

ತನಿಖಾಧಿಕಾರಿಗಳ ನೇಮಕದ ಸ್ವಾತಂತ್ರ್ಯ ನೀಡಬೇಕಿತ್ತು

ಕೆಪಿಎಸ್‌ಸಿ ಹಗರಣದ ಕುರಿತು ಉಚ್ಚ ನ್ಯಾಯಾಲಯ ವಿಶೇಷ ತನಿಖಾ ತಂಡ ರಚಿಸಲು ನಿರ್ದೇಶಿಸಿರುವುದನ್ನು ಸ್ವಾಗತಿಸುವುದಾಗಿ ತಿಳಿಸಿದ ಮುಖ್ಯಮಂತ್ರಿ, ಜಾರಿ ನಿರ್ದೇಶನಾಲಯವೂ ತನಿಖೆ ನಡೆಸುತ್ತಿದೆ ಎಂದರು.

ರಾಜ್ಯ ಪೊಲೀಸ್ ಇಲಾಖೆಯೂ ಉತ್ತಮವಾಗಿ ತನಿಖೆ ನಡೆಸುತ್ತಿದೆ. ಅಗತ್ಯವಿದ್ದರೆ ನ್ಯಾಯಾಲಯ ರಾಜ್ಯ ಪೊಲೀಸ್ ಇಲಾಖೆಯ ತನಿಖೆಯ ವೈಖರಿಯ ಉಸ್ತುವಾರಿ ನೋಡಬಹುದಿತ್ತು. ವಿಶೇಷ ತನಿಖಾ ತಂಡದ ತನಿಖೆಗೆ ನಿರ್ದೇಶಿಸಿರುವುದು ಸರಿಯಾಗಿದೆ. ಆದರೆ ತನಿಖಾಧಿಕಾರಿಗಳ ನೇಮಕದ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರಕ್ಕೆ ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ಈ ವಿಚಾರವಾಗಿ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಂದ ಕರೆಗಳು ಬಂದಿವೆ. ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುವುದಾಗಿ ತಿಳಿಸಿದರು.

ಮಕ್ಕಳ ಭವಿಷ್ಯ ಮುಖ್ಯವಾಗಿದ್ದು, ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರು ತಮ್ಮ ಅವಧಿಯಲ್ಲಿ ಕೆಪಿಎಸ್‌ಸಿಯಲ್ಲಿದ್ದ ಸದಸ್ಯರ ಸಂಖ್ಯೆಯನ್ನು ಕಡಿತಗೊಳಿಸಿದ್ದರು. ನಂಬಿಕೆ ಇಟ್ಟು ಪಾರದರ್ಶಕವಾಗಿ ಅಧಿಕಾರಿಗಳನ್ನು ಆಯ್ಕೆ ಮಾಡಿ ಕಳುಹಿಸಿದರೂ ಅವರಿಂದಲೇ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಶಿವಕುಮಾರ್ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande