ಸೆ.27ರ ಭಾನುವಾರವೂ ಬ್ಯಾಂಕ್ಗಳು ಕಾರ್ಯನಿರ್ವಹಣೆ:ಪ್ರಹ್ಲಾದ ಜೋಶಿ
ನವದೆಹಲಿ, 23 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಬ್ಯಾಂಕ್‌ಗಳ ಒಕ್ಕೂಟ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳಲ್ಲಿ ತೊಂದರೆಯಾಗದಂತೆ ಸೆ.27ರ ಭಾನುವಾರವೂ ಬ್ಯಾಂಕ್‌ಗಳನ್ನು ಪೂರ್ಣಾವಧಿ ಕಾರ್ಯನಿರ್ವಹಿಸುವಂತೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ
ಪ್ರಹ್ಲಾದ ಜೋಶಿ ಸಂಗ್ರಹ ಚಿತ್ರ


ನವದೆಹಲಿ, 23 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಬ್ಯಾಂಕ್‌ಗಳ ಒಕ್ಕೂಟ ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳಲ್ಲಿ ತೊಂದರೆಯಾಗದಂತೆ ಸೆ.27ರ ಭಾನುವಾರವೂ ಬ್ಯಾಂಕ್‌ಗಳನ್ನು ಪೂರ್ಣಾವಧಿ ಕಾರ್ಯನಿರ್ವಹಿಸುವಂತೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ಸೆ.28ರಿಂದ 30ರವರೆಗೆ ದೇಶಾದ್ಯಂತ ಮೂರು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಷ್ಕರಕ್ಕೂ ಮುನ್ನ ಗ್ರಾಹಕರಿಗೆ ಅಗತ್ಯ ಬ್ಯಾಂಕಿಂಗ್ ಸೇವೆಗಳು ಲಭ್ಯವಾಗುವಂತೆ ಸೆ.27ರ ಭಾನುವಾರ ರಜಾ ದಿನವಾಗಿದ್ದರೂ ಬ್ಯಾಂಕ್‌ಗಳನ್ನು ಎಂದಿನಂತೆ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಹಕರ ಬ್ಯಾಂಕಿಂಗ್ ಅಗತ್ಯಗಳಿಗೆ ಯಾವುದೇ ಅಡಚಣೆಯಾಗದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಸೆ.27ರಂದು ಸಾರ್ವಜನಿಕ ವಲಯದ ಎಲ್ಲಾ ಬ್ಯಾಂಕ್‌ಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಪೂರ್ಣಾವಧಿ ಕಾರ್ಯನಿರ್ವಹಿಸಲಿವೆ ಎಂದು ಅವರು ಹೇಳಿದ್ದಾರೆ.

ಮುಷ್ಕರದ ಹಿನ್ನೆಲೆಯಲ್ಲಿ ಸೆ.27ರಂದು ಬ್ಯಾಂಕ್‌ಗಳು ಕಾರ್ಯನಿರ್ವಹಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಅನುಮತಿ ನೀಡಿದೆ. ಅಂದು ಬ್ಯಾಂಕ್ ಶಾಖೆಗಳು, ಕಚೇರಿಗಳು, ಎಟಿಎಂ ಸಂಪರ್ಕಿತ ಶಾಖೆಗಳು ಹಾಗೂ ಕರೆನ್ಸಿ ಚೆಸ್ಟ್‌ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.

ಸೆ.28ರಿಂದ ಮೂರು ದಿನಗಳ ಕಾಲ ನಡೆಸಲು ಉದ್ದೇಶಿಸಿರುವ ಮುಷ್ಕರವನ್ನು ಮುಂದೂಡುವಂತೆ ಸರ್ಕಾರ ಮತ್ತು ಬ್ಯಾಂಕ್ ಆಡಳಿತ ಮಂಡಳಿಗಳು ಸಂಘಟನೆಗಳಿಗೆ ಮನವಿ ಮಾಡಿವೆ ಎಂದೂ ಅವರು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande