
ವಿಜಯಪುರ, 23 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ
ಬಸವನಬಾಗೇವಾಡಿ ಪಟ್ಟಣದ ವಜ್ರ ಹನುಮಾನ ನಗರ, ಕೇಶವ ನಗರ ಹಾಗೂ ರಾಧಾಕೃಷ್ಣ ನಗರಗಳ ಕೇಂದ್ರ ಬಿಂದುವಾಗಿರುವ ರಾಘವೇಂದ್ರ ಕುಲಕರ್ಣಿ ಲೇಔಟ್ನಲ್ಲಿನ ಸಿಎ ಸೈಟ್ಗಳನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವ ಕ್ರಮವನ್ನು ಖಂಡಿಸಿ, ಅವುಗಳನ್ನು ಎಲ್ಲ ಸಾರ್ವಜನಿಕರ ಸಾಮಾನ್ಯ ಬಳಕೆಗೆ ಮೀಸಲಿಡಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಿಎ ಸೈಟ್ಗಳು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಜಾಗಗಳಾಗಿದ್ದು, ಯಾವುದೇ ಒಂದು ಸಮುದಾಯ ಅಥವಾ ಧರ್ಮಕ್ಕೆ ಮಾತ್ರ ಸೀಮಿತವಾಗದೆ, ಎಲ್ಲ ವರ್ಗದ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಬಳಸಬೇಕು ಎಂದು ಮನವಿ ಮೂಲಕ ಒತ್ತಾಯಿಸಲಾಯಿತು. ವಜ್ರ ಹನುಮಾನ ನಗರ, ಕೇಶವ ನಗರ ಹಾಗೂ ರಾಧಾಕೃಷ್ಣ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಈ ಸ್ಥಳಗಳು ಸಾರ್ವಜನಿಕ ಸೌಲಭ್ಯಗಳಿಗಾಗಿ ಉಪಯೋಗವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಸಿಎ ಸೈಟ್ಗಳ ಮಾಲೀಕರು ಹಾಗೂ ಸ್ಥಳೀಯ ಹಿರಿಯರು, ತಾಯಂದಿರು, ಸೋದರ-ಸೋದರಿಯರು ಸೇರಿದಂತೆ ಹಲವು ಸಾರ್ವಜನಿಕರು ಭಾಗವಹಿಸಿ ತಮ್ಮ ಆಕ್ಷೇಪ ವ್ಯಕ್ತಪಡಿಸಿದರು. ಸಾರ್ವಜನಿಕರ ಅಗತ್ಯತೆ ಹಾಗೂ ಸ್ಥಳೀಯ ನಿವಾಸಿಗಳ ಹಿತಾಸಕ್ತಿಯನ್ನು ಪರಿಗಣಿಸಿ ಅಧಿಕಾರಿಗಳು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಯಿತು.
ಸಿಎ ಸೈಟ್ಗಳ ಬಳಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಉಂಟಾಗಿರುವ ಆತಂಕವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಎಲ್ಲ ಸಮುದಾಯಗಳಿಗೂ ಸಮಾನವಾಗಿ ಉಪಯೋಗವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಯಾವುದೇ ನಿರ್ಧಾರ ಕೈಗೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಸಾರ್ವಜನಿಕರ ಅಭಿಪ್ರಾಯ ಹಾಗೂ ಪ್ರದೇಶದ ಮೂಲಭೂತ ಸೌಲಭ್ಯಗಳ ಅಗತ್ಯತೆಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಯಿತು.
ಅಧಿಕಾರಿಗಳಿಗೆ ಈ ಕುರಿತು 30 ದಿನಗಳ ಕಾಲಾವಕಾಶ ನೀಡಲಾಗಿದ್ದು, ಈ ಅವಧಿಯಲ್ಲಿ ಬೇಡಿಕೆ ಈಡೇರದಿದ್ದರೆ ವಜ್ರ ಹನುಮಾನ ನಗರ, ಕೇಶವ ನಗರ ಹಾಗೂ ರಾಧಾಕೃಷ್ಣ ನಗರಗಳ ಸಾರ್ವಜನಿಕರು, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಅಶೋಕ್ ಹರಿವಾಣ ಎಚ್ಚರಿಕೆ ನೀಡಿದರು.
ಸಾರ್ವಜನಿಕರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಸಿಎ ಸೈಟ್ಗಳ ಕುರಿತು ಸ್ಪಷ್ಟ ನಿರ್ಧಾರ ಕೈಗೊಂಡು, ಅವುಗಳನ್ನು ಎಲ್ಲರಿಗೂ ಅನುಕೂಲವಾಗುವ ಸಾರ್ವಜನಿಕ ಉದ್ದೇಶಗಳಿಗೆ ಬಳಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande