ಎಸ್ಐಆರ್ ಸೇರಿ ಚುನಾವಣಾ ಆಯೋಗದ ಎಲ್ಲ ನಿರ್ಧಾರಗಳು ಸರ್ವಾನುಮತ
ನವದೆಹಲಿ, 23 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಸೇರಿದಂತೆ ಚುನಾವಣಾ ಆಯೋಗ ಕೈಗೊಂಡಿರುವ ಎಲ್ಲ ನಿರ್ಧಾರಗಳನ್ನು ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇಬ್ಬರು ಚುನಾವಣಾ ಆಯುಕ್ತರ ಅನುಮೋದನೆಯೊಂದಿಗೆ ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋ
चुनाव आयोग (फाइल फोटो)


ನವದೆಹಲಿ, 23 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಸೇರಿದಂತೆ ಚುನಾವಣಾ ಆಯೋಗ ಕೈಗೊಂಡಿರುವ ಎಲ್ಲ ನಿರ್ಧಾರಗಳನ್ನು ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇಬ್ಬರು ಚುನಾವಣಾ ಆಯುಕ್ತರ ಅನುಮೋದನೆಯೊಂದಿಗೆ ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಆಯೋಗದೊಳಗಿನ ನಿರ್ಧಾರಗಳ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಎಸ್‌ಐಆರ್ ಸೇರಿದಂತೆ ಇತರ ನಿರ್ಧಾರಗಳಿಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರೊಂದಿಗೆ ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರೂ ಅನುಮೋದನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಚುನಾವಣಾ ಆಯೋಗವು ಮೂವರು ಸದಸ್ಯರನ್ನು ಒಳಗೊಂಡಿದ್ದು, ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿದ್ದಾರೆ. ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಚುನಾವಣಾ ಆಯುಕ್ತರಾಗಿದ್ದಾರೆ.

ಈ ನಡುವೆ, ಇಂಗ್ಲಿಷ್ ಪತ್ರಿಕೆಯೊಂದರ ವರದಿಯಲ್ಲಿ ಕಳೆದ 10 ತಿಂಗಳಲ್ಲಿ ಆಯೋಗದ ಹೆಸರಿನಲ್ಲಿ ಕೈಗೊಂಡ ಕೆಲವು ನಿರ್ಧಾರಗಳಿಗೆ ಇಬ್ಬರು ಚುನಾವಣಾ ಆಯುಕ್ತರು ಕನಿಷ್ಠ 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿತ್ತು. ಮತದಾರರ ನೋಂದಣಿ ಅರ್ಜಿ ನಮೂನೆ-6ರಲ್ಲಿ ಬದಲಾವಣೆ, ಮತದಾರರ ಪಟ್ಟಿಯ ಡಿಜಿಟಲ್ ದಾಖಲೆಗಳಿಗೆ ಪ್ರವೇಶ, ಪಶ್ಚಿಮ ಬಂಗಾಳದಲ್ಲಿ ಮತದಾರರ ಹೆಸರುಗಳಿಗೆ ಸಂಬಂಧಿಸಿದ ಮೇಲ್ಮನವಿ ಹಾಗೂ ಗೋವಾದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಸೇರ್ಪಡೆಗೊಳಿಸುವುದು ಸೇರಿದಂತೆ ಹಲವು ವಿಷಯಗಳಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಈ ವರದಿಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮೂಲಗಳು ಸ್ಪಷ್ಟನೆ ನೀಡಿದ್ದು, ಆಯೋಗದ ಎಲ್ಲ ನಿರ್ಧಾರಗಳನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಹೇಳಿವೆ. ಎಸ್‌ಐಆರ್ ಪ್ರಕ್ರಿಯೆಯೂ ಮೂವರು ಚುನಾವಣಾ ಆಯುಕ್ತರ ಅನುಮೋದನೆಯೊಂದಿಗೆ ಮುಂದುವರಿದಿದೆ ಎಂದು ತಿಳಿಸಿವೆ.

ಎಸ್‌ಐಆರ್‌ಗೆ ಸಂಬಂಧಿಸಿದಂತೆ ಮೂವರು ಆಯುಕ್ತರ ಜಂಟಿ ಪಾತ್ರ ಈ ಹಿಂದೆಯೂ ಬಹಿರಂಗವಾಗಿತ್ತು. 2025ರ ಅಕ್ಟೋಬರ್‌ನಲ್ಲಿ ಎಸ್‌ಐಆರ್ ಸಿದ್ಧತೆ ಕುರಿತು ನಡೆದ ಮುಖ್ಯ ಚುನಾವಣಾಧಿಕಾರಿಗಳ ಸಮ್ಮೇಳನಕ್ಕೆ ಜ್ಞಾನೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನದಲ್ಲಿ ಇಬ್ಬರು ಚುನಾವಣಾ ಆಯುಕ್ತರೂ ಭಾಗವಹಿಸಿದ್ದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande