
ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಬಾಕಿ ಇರುವ ಪ್ರಕ್ರಿಯೆಗಳನ್ನು ಈ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಭರವಸೆ ನೀಡಿದ್ದಾರೆ.
ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯ ನೆರವು ಕಲ್ಪಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ.
ಇದೇ ವೇಳೆ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ಕ್ರಮಗಳನ್ನು ಶೀಘ್ರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
“ರೈತರಿಗೆ ಸಂಬಂಧಿಸಿದ ಎಲ್ಲ ಅಗತ್ಯ ಪ್ರಕ್ರಿಯೆಗಳನ್ನು ಈ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು. ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R