ಸ್ಕಾರ್ಪಿಯೋ–ಬೈಕ್ ಮುಖಾಮುಖಿ ಡಿಕ್ಕಿ: ಯುವಕ ಸಾವು
ಕಲಬುರಗಿ, 23 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಸ್ಕಾರ್ಪಿಯೋ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಹೊರವಲಯದ ಹಡಗಿಲ್ ಹಾರುತಿ ಕ್ರಾಸ್ ಬಳಿ ನಡೆದಿದೆ. ಅಫಜಲಪುರ ತಾಲೂಕಿನ
ಸ್ಕಾರ್ಪಿಯೋ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಹೊರವಲಯದ ಹಡಗಿಲ್ ಹಾರುತಿ ಕ್ರಾಸ್ ಬಳಿ ನಡೆದಿದೆ. ಅಫಜಲಪುರ ತಾಲೂಕಿನ ಬೀದನೂರ ಗ್ರಾಮದ ಶಾಂತಕುಮಾರ್ (23) ಮೃತಪಟ್ಟವರು. ಅವರೊಂದಿಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಮಾಳಪ್ಪ (24) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಂತಕುಮಾರ್ ಹಾಗೂ ಮಾಳಪ್ಪ ಅವರು KA-32 HG-3627 ಸಂಖ್ಯೆಯ ಬೈಕ್ನಲ್ಲಿ ಕಲಬುರಗಿಯಿಂದ ಬೀದನೂರ ಕಡೆಗೆ ತೆರಳುತ್ತಿದ್ದರು. ಇದೇ ವೇಳೆ ಗಾಣಗಾಪುರದಿಂದ ಕಲಬುರಗಿ ಕಡೆಗೆ ಸಂಚರಿಸುತ್ತಿದ್ದ ಸ್ಕಾರ್ಪಿಯೋ ಕಾರು ಹಡಗಿಲ್ ಹಾರುತಿ ಕ್ರಾಸ್ ಬಳಿ ಬೈಕ್ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆ–1ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಕಲಬುರಗಿ, 23 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಸ್ಕಾರ್ಪಿಯೋ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಹೊರವಲಯದ ಹಡಗಿಲ್ ಹಾರುತಿ ಕ್ರಾಸ್ ಬಳಿ ನಡೆದಿದೆ.

ಅಫಜಲಪುರ ತಾಲೂಕಿನ ಬೀದನೂರ ಗ್ರಾಮದ ಶಾಂತಕುಮಾರ್ (23) ಮೃತಪಟ್ಟವರು. ಅವರೊಂದಿಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಮಾಳಪ್ಪ (24) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಂತಕುಮಾರ್ ಹಾಗೂ ಮಾಳಪ್ಪ ಅವರು KA-32 HG-3627 ಸಂಖ್ಯೆಯ ಬೈಕ್ನಲ್ಲಿ ಕಲಬುರಗಿಯಿಂದ ಬೀದನೂರ ಕಡೆಗೆ ತೆರಳುತ್ತಿದ್ದರು. ಇದೇ ವೇಳೆ ಗಾಣಗಾಪುರದಿಂದ ಕಲಬುರಗಿ ಕಡೆಗೆ ಸಂಚರಿಸುತ್ತಿದ್ದ ಸ್ಕಾರ್ಪಿಯೋ ಕಾರು ಹಡಗಿಲ್ ಹಾರುತಿ ಕ್ರಾಸ್ ಬಳಿ ಬೈಕ್ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆ–1ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande