ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ ನೇಮಕ: ವಿಜುಗೌಡ ಪಾಟೀಲ್ ಅಭಿನಂದನೆ
ವಿಜಯಪುರ, 23 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹರೀಶ್ ದ್ವಿವೇದಿ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿಯ ಉಸ್ತುವಾರಿಯಾಗಿ ನೇಮಕ ಮಾಡಿರುವುದಕ್ಕೆ ವಿಜಯಪುರ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಅವರು ಹೃತ್ಪೂರ್ವಕ ಅಭಿನಂದನೆ ಹಾಗೂ ಶುಭಾಶಯಗಳನ್ನು ತಿಳ
ಅಭಿನಂದನೆ


ವಿಜಯಪುರ, 23 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹರೀಶ್ ದ್ವಿವೇದಿ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿಯ ಉಸ್ತುವಾರಿಯಾಗಿ ನೇಮಕ ಮಾಡಿರುವುದಕ್ಕೆ ವಿಜಯಪುರ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಅವರು ಹೃತ್ಪೂರ್ವಕ ಅಭಿನಂದನೆ ಹಾಗೂ ಶುಭಾಶಯಗಳನ್ನು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಪಕ್ಷದ ಸಂಘಟನೆ, ಕಾರ್ಯಕರ್ತರೊಂದಿಗೆ ಸಮನ್ವಯ ಹಾಗೂ ಪಕ್ಷದ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಹರೀಶ್ ದ್ವಿವೇದಿ ಅವರ ನೇಮಕ ಮಹತ್ವದ್ದಾಗಿದೆ ಎಂದು ವಿಜುಗೌಡ ಪಾಟೀಲ್ ತಿಳಿಸಿದ್ದಾರೆ.

ಪಕ್ಷದ ರಾಷ್ಟ್ರೀಯ ನಾಯಕತ್ವವು ಹರೀಶ್ ದ್ವಿವೇದಿ ಅವರಿಗೆ ಕರ್ನಾಟಕದ ಜವಾಬ್ದಾರಿ ವಹಿಸಿರುವುದು ಸಂತಸದ ವಿಚಾರವಾಗಿದ್ದು, ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಘಟನೆ ಇನ್ನಷ್ಟು ಬಲಿಷ್ಠಗೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವುದು ಮತ್ತು ಸಂಘಟನಾತ್ಮಕ ಚಟುವಟಿಕೆಗಳಿಗೆ ಉತ್ತೇಜನ ನೀಡುವಲ್ಲಿ ನೂತನ ಉಸ್ತುವಾರಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ವಿಜುಗೌಡ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಹರೀಶ್ ದ್ವಿವೇದಿ ಅವರ ಅನುಭವ ಮತ್ತು ಸಂಘಟನಾ ಸಾಮರ್ಥ್ಯವನ್ನು ಕರ್ನಾಟಕದಲ್ಲಿ ಪಕ್ಷದ ಬಲವರ್ಧನೆಗೆ ಬಳಸಿಕೊಳ್ಳುವ ಅವಕಾಶ ದೊರೆತಿದ್ದು, ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande