ವಂದೇ ಮಾತರಂ ಹಾಡದಿದ್ದರೆ ಅಪರಾಧಿಯನ್ನಾಗಿ ಮಾಡಲು ಸಾಧ್ಯವಿಲ್ಲ: ಬಿ.ಕೆ. ಹರಿಪ್ರಸಾದ್
‘ವಂದೇ ಮಾತರಂ’ ಹಾಡದಿದ್ದರೆ ಅಪರಾಧಿಯನ್ನಾಗಿ ಮಾಡಲು ಸಾಧ್ಯವಿಲ್ಲ: ಬಿ.ಕೆ. ಹರಿಪ್ರಸಾದ್
‘ವಂದೇ ಮಾತರಂ’ ಹಾಡದಿದ್ದರೆ ಅಪರಾಧಿಯನ್ನಾಗಿ ಮಾಡಲು ಸಾಧ್ಯವಿಲ್ಲ: ಬಿ.ಕೆ. ಹರಿಪ್ರಸಾದ್


ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಧಾರ್ಮಿಕ ನಂಬಿಕೆ ಅಥವಾ ಆತ್ಮಸಾಕ್ಷಿಯ ಕಾರಣದಿಂದ ‘ವಂದೇ ಮಾತರಂ’ ಹಾಡಲು ನಿರಾಕರಿಸುವ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂಬ ಸಂವಿಧಾನಾತ್ಮಕ ನಿಲುವನ್ನು ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಸ್ಪಷ್ಟಪಡಿಸಿರುವುದನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ವಾಗತಿಸಿದ್ದಾರೆ.

ದೇಶಭಕ್ತಿ ಎಂದರೆ ಯಾರನ್ನಾದರೂ ಕಡ್ಡಾಯವಾಗಿ ಒಂದು ಹಾಡನ್ನು ಹಾಡುವಂತೆ ಒತ್ತಾಯಿಸುವುದಲ್ಲ. ಸಂವಿಧಾನವನ್ನು ಗೌರವಿಸುವುದು, ದೇಶದ ವೈವಿಧ್ಯತೆಯನ್ನು ಗೌರವಿಸುವುದು ಹಾಗೂ ಪ್ರತಿಯೊಬ್ಬ ನಾಗರಿಕನ ಆತ್ಮಸಾಕ್ಷಿಯ ಸ್ವಾತಂತ್ರ್ಯವನ್ನು ರಕ್ಷಿಸುವುದೂ ದೇಶಭಕ್ತಿಯ ಭಾಗವಾಗಿದೆ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಎಐಸಿಸಿ ಕಾರ್ಯಕಾರಿ ಸಮಿತಿ ಹಾಗೂ ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಹಾಡುವ ನಿರ್ಧಾರ ಕೈಗೊಂಡಿದೆ. ಈ ವಿಚಾರದಲ್ಲಿ ಪಕ್ಷದ ನಿಲುವು ಸ್ಪಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

ವಂದೇ ಮಾತರಂ ಹಾಡುವುದನ್ನು ಯಾರೂ ವಿರೋಧಿಸುತ್ತಿಲ್ಲ. ಆದರೆ ಹಾಡನ್ನು ಗೌರವಿಸುವ ಹೆಸರಿನಲ್ಲಿ ಸಂವಿಧಾನವನ್ನು ಪಕ್ಕಕ್ಕೆ ಸರಿಸಲು ಸಾಧ್ಯವಿಲ್ಲ. ದೇಶವನ್ನು ಪ್ರೀತಿಸುವ ಹಕ್ಕಿನ ಜತೆಗೆ, ತನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವ ಹಕ್ಕು ಕೂಡ ಪ್ರತಿಯೊಬ್ಬ ನಾಗರಿಕನಿಗಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಕರ್ನಾಟಕ ವಿಧಾನಸಭೆಯಲ್ಲಿ ವಂದೇ ಮಾತರಂನ ಪೂರ್ಣ ಆವೃತ್ತಿ ಹಾಡುವ ವಿಚಾರವಾಗಿ ನಡೆದ ಬೆಳವಣಿಗೆಗಳನ್ನು ಉಲ್ಲೇಖಿಸಿದ ಹರಿಪ್ರಸಾದ್, ಬಿಜೆಪಿಯನ್ನು ಟೀಕಿಸಿದ್ದಾರೆ. “ಸುಪ್ರೀಂ ಕೋರ್ಟ್ನ ಈ ನಿಲುವಿನಿಂದ ವಂದೇ ಮಾತರಂ ಹಾಡಲು ಬಾರದ ಬಿಜೆಪಿಗರು ಇದೀಗ ಕನಿಷ್ಠ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande