ಕರವೇ ನಾರಾಯಣಗೌಡರಿಂದ ದಸರಾ ಉದ್ಘಾಟನೆ ಮಾಡಿಸಿ: ಅಭಿಮಾನಿಗಳ ಮನವಿ
ಕರವೇ ನಾರಾಯಣಗೌಡರಿಂದ ದಸರಾ ಉದ್ಘಾಟನೆ ಮಾಡಿಸಿ: ಅಭಿಮಾನಿಗಳ ಮನವಿ
fans-urge-karnataka-government-to-have-karave-narayana-gowda-inaugurate-mysuru-dasara


ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರಿಂದ ಉದ್ಘಾಟನೆ ಮಾಡಿಸಬೇಕು ಎಂದು ಮಲ್ಟಿಸ್ಟಾರ್ ಶಿವರಾಜ್ಕುಮಾರ್ ಅಭಿಮಾನಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕೆ. ಚಂದ್ರಶೇಖರ್ (ಚನ್ನ) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಕನ್ನಡ ನಾಡು, ನುಡಿ ಹಾಗೂ ನೆಲ-ಜಲದ ವಿಚಾರದಲ್ಲಿ ನಾರಾಯಣಗೌಡ ಮತ್ತು ಕರವೇ ಕಾರ್ಯಕರ್ತರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಆಂಗ್ಲ ನಾಮಫಲಕಗಳ ಹಾವಳಿ ತಗ್ಗಿಸುವಲ್ಲಿಯೂ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.

“ಕಳೆದ 40 ವರ್ಷಗಳಿಂದ ಕನ್ನಡ ನೆಲ, ಜಲ ಹಾಗೂ ಭಾಷೆಗಾಗಿ ಸಾವಿರಾರು ಹೋರಾಟಗಳಲ್ಲಿ ಭಾಗವಹಿಸಿರುವ ನಾರಾಯಣಗೌಡ ಅವರು ಈಗಲೂ ಕನ್ನಡಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ.

ಆದ್ದರಿಂದ ಈ ವರ್ಷದ ನಾಡಹಬ್ಬ ಮೈಸೂರು ದಸರಾವನ್ನು ಅವರಿಂದ ಉದ್ಘಾಟನೆ ಮಾಡಿಸಬೇಕು” ಎಂದು ಕೆ. ಚಂದ್ರಶೇಖರ್ (ಚನ್ನ) ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande