ದೆಹಲಿಯಿಂದ ಮಹೋಬಾಗೆ ತೆರಳುತ್ತಿದ್ದ ಬಸ್ಗೆ ಬೆಂಕಿ: ಮಹಿಳೆ ಸೇರಿ 9 ಮಂದಿ ಸಾವು
ನೋಯ್ಡಾ, 24 ಸೆಪ್ಟೆಂಬರ್ (ಹಿ.ಸ): ಆ್ಯಂಕರ್:ದೆಹಲಿಯ ಕಾಶ್ಮೀರಿ ಗೇಟ್‌ನಿಂದ ಉತ್ತರ ಪ್ರದೇಶದ ಮಹೋಬಾಗೆ ತೆರಳುತ್ತಿದ್ದ ದ್ವಿತಲ ಬಸ್‌ಗೆ ಯಮುನಾ ಎಕ್ಸ್‌ಪ್ರೆಸ್‌ವೇಯ 33ನೇ ಕಿಲೋಮೀಟರ್‌ನಲ್ಲಿ ಬುಧವಾರ ಮಧ್ಯರಾತ್ರಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆ ಸೇರಿದಂತೆ ಒಂಬತ್ತು ಮಂದಿ ಸಜೀವ ದಹನಗೊ
यमुना एक्सप्रेसवे पर लगी बस में आग बुझाते और रेस्क्यू करते पुलिसकर्मी, प्रत्यक्षदर्शी रिंकी राजपूत, सवारियों के जले सामान तथा बस के अंदर शवों की तलाश करते पुलिसकर्मियों की फोटो


ನೋಯ್ಡಾ, 24 ಸೆಪ್ಟೆಂಬರ್ (ಹಿ.ಸ):

ಆ್ಯಂಕರ್:ದೆಹಲಿಯ ಕಾಶ್ಮೀರಿ ಗೇಟ್‌ನಿಂದ ಉತ್ತರ ಪ್ರದೇಶದ ಮಹೋಬಾಗೆ ತೆರಳುತ್ತಿದ್ದ ದ್ವಿತಲ ಬಸ್‌ಗೆ ಯಮುನಾ ಎಕ್ಸ್‌ಪ್ರೆಸ್‌ವೇಯ 33ನೇ ಕಿಲೋಮೀಟರ್‌ನಲ್ಲಿ ಬುಧವಾರ ಮಧ್ಯರಾತ್ರಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆ ಸೇರಿದಂತೆ ಒಂಬತ್ತು ಮಂದಿ ಸಜೀವ ದಹನಗೊಂಡಿದ್ದಾರೆ.

ಘಟನೆ ವೇಳೆ ಬಸ್‌ನಲ್ಲಿ ಒಟ್ಟು 35 ಮಂದಿ ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಬಸ್‌ನಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಕೆಲವರು ಹೊರಬರಲಾಗದೆ ಸಿಲುಕಿಕೊಂಡಿದ್ದರು. ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಜಿಲ್ಲಾಡಳಿತದ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದವು.

ರಕ್ಷಣಾ ಕಾರ್ಯಾಚರಣೆಯಲ್ಲಿ ಸುಮಾರು 26 ಮಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು. ಕೆಲವರು ದಟ್ಟ ಹೊಗೆಯಿಂದ ಪ್ರಜ್ಞಾಹೀನರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸ್‌ನಲ್ಲಿ ಕೆಲವರು ನಿದ್ರಿಸುತ್ತಿದ್ದ ಕಾರಣ ಬೆಂಕಿ ಕಾಣಿಸಿಕೊಂಡಾಗ ಅವರಿಗೆ ಅಪಾಯದ ಅರಿವಾಗದೆ ಒಳಗೇ ಸಿಲುಕಿಕೊಂಡಿದ್ದರು. ಪೊಲೀಸರು ಬಸ್‌ನ ಗಾಜುಗಳನ್ನು ಒಡೆದು, ಅನಿಲ ಕತ್ತರಿಸುವ ಯಂತ್ರದ ಮೂಲಕ ಬಸ್‌ನ ಹಲವು ಭಾಗಗಳನ್ನು ಕತ್ತರಿಸಿ ಒಳಗೆ ಸಿಲುಕಿದ್ದವರನ್ನು ಹೊರತೆಗೆದರು. ಬೆಂಕಿಯಿಂದ ಸಂಪೂರ್ಣ ಬಸ್‌ ಹೊಗೆಯಿಂದ ತುಂಬಿಕೊಂಡಿತ್ತು.

ಗುರುತು ಪತ್ತೆ ಕಾರ್ಯ ಮುಂದುವರಿಕೆ

ಅಪರ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ರಾಜೀವ್ ನಾರಾಯಣ ಮಿಶ್ರಾ ಅವರು ಘಟನೆಯ ಕುರಿತು ಮಾಹಿತಿ ನೀಡಿದ್ದು, ಮೃತಪಟ್ಟವರಲ್ಲಿ ಕೆಲವರ ಗುರುತು ಪತ್ತೆಯಾಗಿದೆ. ಇನ್ನೂ ಕೆಲವರ ಗುರುತು ಪತ್ತೆಯಾಗಿಲ್ಲ. ಎಲ್ಲರ ಗುರುತು ಪತ್ತೆಹಚ್ಚಿ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಘಟನೆಯಿಂದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಮಧ್ಯರಾತ್ರಿಯಿಂದ ಬೆಳಗಿನವರೆಗೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ನಿದ್ರೆಯಲ್ಲಿದ್ದಾಗ ಎಚ್ಚರಿಸಿದ ಪ್ರಯಾಣಿಕ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ರಿಂಕಿ ರಾಜಪೂತ್ ಅವರು ನೊಯ್ಡಾದಿಂದ ಬಸ್ ಹತ್ತಿ ರಾಠ್‌ಗೆ ತೆರಳುತ್ತಿದ್ದರು. ಘಟನೆ ಸಂಭವಿಸಿದಾಗ ತಾವು ನಿದ್ರಿಸುತ್ತಿದ್ದುದಾಗಿ ಅವರು ತಿಳಿಸಿದ್ದಾರೆ. ಒಬ್ಬ ಪ್ರಯಾಣಿಕರು ತಮ್ಮ ಕೋಣೆಯ ಬಾಗಿಲನ್ನು ಜೋರಾಗಿ ಬಡಿದು ಎಚ್ಚರಿಸಿದ ಬಳಿಕ ಹೊರಗೆ ಬಂದಿದ್ದಾಗಿ ಹೇಳಿದ್ದಾರೆ.

ಬೆಂಕಿ ಕಾಣಿಸಿಕೊಂಡ ಬಳಿಕ ಪ್ರಯಾಣಿಕರು ಜೀವ ಉಳಿಸಿಕೊಳ್ಳಲು ಆತಂಕದಿಂದ ಹೊರಗೆ ಓಡಿದರು. ಯಾರಿಗೂ ತಮ್ಮ ಸಾಮಾನುಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಅನೇಕ ಪ್ರಯಾಣಿಕರ ನಗದು, ಆಭರಣ, ಮೊಬೈಲ್‌ಗಳು ಸೇರಿದಂತೆ ಇತರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ರಿಂಕಿ ತಿಳಿಸಿದ್ದಾರೆ.

ಪೊಲೀಸ್ ಹಾಗೂ ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ತಲುಪಲು ಸುಮಾರು ಅರ್ಧ ಗಂಟೆ ತೆಗೆದುಕೊಂಡಿತು ಎಂದು ಅವರು ಹೇಳಿದ್ದಾರೆ. ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕಿಂತ ಹೆಚ್ಚಿರಬಹುದು ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande