ರಾಜ್ಯ ಸರ್ಕಾರ ಆರ್ಥಿಕ ದಿವಾಳಿತನದತ್ತ:ಶಾಂತಗೌಡ ಪಾಟೀಲ್
ಬಾಗಲಕೋಟೆ, 24 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಗುರುವಾರ ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ
ಪ್ರತಿಭಟನೆ


ಬಾಗಲಕೋಟೆ, 24 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಗುರುವಾರ ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ರಾಜ್ಯ ಸರ್ಕಾರದ ಆಡಳಿತ ಮತ್ತು ಆರ್ಥಿಕ ನಿರ್ವಹಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಜನರಿಗೆ ನೀಡಿರುವ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸುವ ಬದಲು ವಿವಿಧ ರೀತಿಯ ಭರವಸೆಗಳನ್ನು ನೀಡುತ್ತಲೇ ಜನರನ್ನು ದಿಕ್ಕುತಪ್ಪಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಸರ್ಕಾರ ಸ್ಪಷ್ಟ ಮಾಹಿತಿ ನೀಡಬೇಕು. ಜನರ ತೆರಿಗೆ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು. ರೈತರು, ಕಾರ್ಮಿಕರು, ಬಡವರು, ಮಧ್ಯಮ ವರ್ಗ ಸೇರಿದಂತೆ ವಿವಿಧ ವರ್ಗಗಳ ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸರ್ಕಾರ ಘೋಷಿಸಿರುವ ಯೋಜನೆಗಳು ಹಾಗೂ ಭರವಸೆಗಳ ಅನುಷ್ಠಾನದಲ್ಲಿ ಉಂಟಾಗಿರುವ ವಿಳಂಬದ ಕುರಿತು ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ಜನರಿಗೆ ನೀಡಿರುವ ಭರವಸೆಗಳನ್ನು ಜಾರಿಗೊಳಿಸುವ ಮೂಲಕ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು.

ಬಸವೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜು ನಾಯ್ಕರ, ಬಸವರಾಜ ಯಂಕಂಚಿ, ಸುರೇಶ ಕೋಣ್ಣೂರ, ಮಲ್ಲಯ್ಯ ಮೂಗನೂರಮಠ, ಬಸವರಾಜ ಹುನಗುಂದ ಸೇರಿದಂತೆ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯ ಮೂಲಕ ಸರ್ಕಾರದ ಆರ್ಥಿಕ ನೀತಿಗಳು ಹಾಗೂ ಜನಪರ ಯೋಜನೆಗಳ ಅನುಷ್ಠಾನದ ಕುರಿತು ತಮ್ಮ ಅಸಮಾಧಾನವನ್ನು ಬಿಜೆಪಿ ಮುಖಂಡರು ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande