
ಬಳ್ಳಾರಿ, 24 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವುಂಕಿ ಸಣ್ಣರುದ್ರಪ್ಪ ಕಾನೂನು ಮಹಾವಿದ್ಯಾಲಯದ ಸಹಯೋಗದಲ್ಲಿ ಲಾ ಕಾಲೇಜಿನಲ್ಲಿ
`ನಾಟ್ಯ ಕಲಾಪ್ರಪೂರ್ಣ ಬಳ್ಳಾರಿ ಟಿ. ರಾಘವಾಚಾರ್ಯ ದತ್ತಿ' ಕಾರ್ಯಕ್ರಮವು ಗುರುವಾರ ನಡೆಯಿತು.
ಬಳ್ಳಾರಿಯ ರಾಘವ ಮೆಮೊರಿಯಲ್ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿರುವ ಕೆ. ಚೆನ್ನಪ್ಪ ಅವರು ದತ್ತಿಯನ್ನು ಉದ್ಘಾಟಿಸಿ, ರಾಘವರು ರಂಗ ಕಲಾವಿದರಾಗಿ ದೇಶವಿದೇಶಗಳಲ್ಲಿ ನಾಟಕ ಪ್ರದರ್ಶನ ಮಾಡುವ ಮೂಲಕ ಬಳ್ಳಾರಿಯ ಕೀರ್ತಿಯನ್ನು ಅಂತಾರಾಷ್ಟ್ರೀಯಮಟ್ಟದಲ್ಲಿ ಹೆಚ್ಚಿಸಿದ್ದರು ಎಂದರು ಹೇಳಿದರು.
ವಿಶ್ರಾಂತ ಉಪನ್ಯಾಸಕ ಎನ್. ಬಸವರಾಜ ಅವರು, ಬಳ್ಳಾರಿ ರಾಘವರ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಿದರು. ಬಳ್ಳಾರಿ ವಕೀಲರ ಸಂಘದ ಅಧ್ಯಕ್ಷರಾದ ಪಿ. ರಾಮಬ್ರಹ್ಮಂ ಅವರು, ಕಾನೂನು ವಿದ್ಯಾರ್ಥಿಗಳಿಗೆ ಕರ್ನಾಟಕ ಸಿವಿಲ್ ನ್ಯಾಯಾಲಯಗಳ ತಿದ್ದುಪಡಿ ವಿಧೇಯಕ ಮತ್ತು ಸಿವಿಲ್ ಪ್ರಕ್ರಿಯೆ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ ಕುರಿತು ವಿಶೇಷ ಉಪನ್ಯಾಸ ನೀಡಿದರು.
ವುಂಕಿ ಸಣ್ಣರುದ್ರಪ್ಪ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಟಿ. ನರೇಂದ್ರಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ,
ಕನ್ನಡ ಸಾಹಿತ್ಯ ಪರಿಷತ್ತು ಸೇರಿ ಸಾಹಿತ್ಯದ ಚಟುವಟಿಕೆಗಳಿಗೆ ಸದಾಕಾಲ ಪ್ರೋತ್ಸಾಹ ನೀಡುವುದಾಗಿ ಹೇಳಿದರು.
ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಣ್ಣಾಜಿ ಕೃಷ್ಣಾರೆಡ್ಡಿ ಅವರು ರಚಿಸಿರುವ
`ಜಂಗಮಕ್ಕಳಿವಿಲ್ಲ ಮತ್ತು ಒಂದು ಸಾವಿನ ಸುತ್ತ' ಕೃತಿಯನ್ನು' ರಾಘವ ಕಲಾ ಮಂದಿರದ ಉಪಾಧ್ಯಕ್ಷರಾದ ಬಾಣಾಪುರ ರಮೇಶಗೌಡ ಅವರು ಲೋಕಾರ್ಪಣೆ ಮಾಡಿದರು. ಕೃತಿ ಕುರಿತು ಸತ್ಯಂ ಬಿಇಡಿ ಕಾಲೇಜಿನ ಅಧ್ಯಾಪಕ ಅಲಂಬಾಷಾ ಅವರು ಮಾತನಾಡಿದರು.
ರಾಘವ ಮೆಮೋರಿಯಲ್ ಅಸೋಸಿಯೇಷನ್ ಕಾರ್ಯದರ್ಶಿಗಳಾದ ಎನ್. ಪ್ರಕಾಶ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಭಾರತಿ ಅವರು ಸ್ವಾಗತಿಸಿದರು. ಅಣ್ಣಾಜಿ ಕೃಷ್ಣಾರೆಡ್ಡಿ ಅವರು ಪ್ರಾರ್ಥನೆ ಸಲ್ಲಿಸಿದರು. ಕಸಾಪ ಜಿಲ್ಲಾ ಸಂಚಾಲಕ ಕಪ್ಪಗಲ್ಲು ಬಿ. ಚಂದ್ರಶೇಖರಚಾರ್ ಅವರು ಕಾರ್ಯಕ್ರಮ ನಿರೂಪಿಸಿದರು. ಕು. ನಂದಿತಾ ವಂದನಾರ್ಪಣೆ ಸಲ್ಲಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್