ಬೆಂಗಳೂರಿನ ಘನತ್ಯಾಜ್ಯ ಸಮಸ್ಯೆ ಕುರಿತು ಸಾರ್ವಜನಿಕರ ಜೊತೆ ಸಮಾಲೋಚನೆ
ಸರ್ಕಾರದಿಂದ ಸಾರ್ವಜನಿಕ ಸಮಾಲೋಚನೆ
Bengaluru-Waste-Management-Public-Consultation-Government-GBA-Krishna-Byre-Gowda


ಬೆಂಗಳೂರು, 24 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಮುಖ ಸಮಸ್ಯೆಯಾಗಿರುವ ಘನತ್ಯಾಜ್ಯ ನಿರ್ವಹಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಾರ್ವಜನಿಕ ಸಮಾಲೋಚನಾ ಕಾರ್ಯಕ್ರಮ ಆಯೋಜಿಸಿದೆ.

ಜವಾಹರ್ಲಾಲ್ ನೆಹರೂ ತಾರಾಲಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ನಗರದ ತ್ಯಾಜ್ಯ ನಿರ್ವಹಣೆ ಕುರಿತು ಸಾರ್ವಜನಿಕರಿಂದ ಸಲಹೆ, ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ.

ನಗರದ ತ್ಯಾಜ್ಯ ಸಮಸ್ಯೆಗೆ ಜನಸಾಮಾನ್ಯರ ಭಾಗವಹಿಸುವಿಕೆಯೊಂದಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಸಮಾಲೋಚನೆ ನಡೆಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಸಚಿವ ಕೃಷ್ಣ ಬೈರೇಗೌಡ, ಜಿಬಿಎ ಆಯುಕ್ತ ಮಹೇಶ್ವರ್ ರಾವ್, BSWMLನ ಕರೀಗೌಡ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಬೆಂಗಳೂರಿನಲ್ಲಿ ಟ್ರಾಫಿಕ್ ಒಂದು ಸಮಸ್ಯೆಯಾಗಿದ್ದರೆ, ಕಸದ ಸಮಸ್ಯೆಯೂ ದೊಡ್ಡ ಸವಾಲಾಗಿದೆ ಎಂದು ಹೇಳಿದರು.

“ಬೆಂಗಳೂರಿನಲ್ಲಿ ಟ್ರಾಫಿಕ್ ಒಂದು ಸಮಸ್ಯೆ ಆದ್ರೆ, ಕಸದ ಸಮಸ್ಯೆ ದೊಡ್ಡದು. ಬೇರೆ ಬೇರೆ ಕೆಲಸಗಳ ಬಗ್ಗೆಯೂ ಗಮನ ಕೊಡುತ್ತಿದ್ದೇವೆ. ಸ್ಟ್ರೀಟ್ ಲೈಟ್ಸ್, ಫುಟ್ಪಾತ್ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸುತ್ತಿದ್ದೇವೆ. ಖಾತೆ ಸಂಬಂಧಿತ ಕೆಲಸಗಳನ್ನೂ ಮಾಡುತ್ತಿದ್ದೇವೆ. ವ್ಯವಸ್ಥೆಯಲ್ಲಿ ಒಂದು ಶಿಸ್ತು ತರಲು ಪ್ರಯತ್ನಿಸುತ್ತಿದ್ದೇವೆ. ಮನೆ ಮನೆ ಕಸ ಸಂಗ್ರಹದ ವಿಚಾರದಲ್ಲಿಯೂ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಅವರು ಹೇಳಿದರು.

ನಗರದ ಘನತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಸಾರ್ವಜನಿಕರ ಸಲಹೆಗಳನ್ನು ಪಡೆದು ಮುಂದಿನ ಕ್ರಮಗಳನ್ನು ರೂಪಿಸಲು ಸರ್ಕಾರ ಮುಂದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande