ಖ್ಯಾತ ಮನೋವೈದ್ಯ ಡಾ. ಆನಂದ ಪಾಂಡುರಂಗಿ ನಿಧನ
ಧಾರವಾಡ, 24 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಧಾರವಾಡದ ಖ್ಯಾತ ಮನೋವೈದ್ಯ ಡಾ. ಆನಂದ ಪಾಂಡುರಂಗಿ (74) ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ
ಡಾ.ಆನಂದ ಪಾಂಡುರಂಗಿ ಸಂಗ್ರಹ ಚಿತ್ರ(ಕೃಪೆ, ಅಂತರ್ಜಾಲ)


ಧಾರವಾಡ, 24 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಧಾರವಾಡದ ಖ್ಯಾತ ಮನೋವೈದ್ಯ ಡಾ. ಆನಂದ ಪಾಂಡುರಂಗಿ (74) ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಎರಡು ದಿನಗಳ ಹಿಂದೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಕೊನೆಯುಸಿರೆಳೆದರು.

ಮನೋವೈದ್ಯರಾಗಿ ಅನೇಕ ಮನೋರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಡಾ. ಆನಂದ ಪಾಂಡುರಂಗಿ ಜನಮಾನಸದಲ್ಲಿ ಗುರುತಿಸಿಕೊಂಡಿದ್ದರು. ಮನೋವಿಜ್ಞಾನಕ್ಕೆ ಸಂಬಂಧಿಸಿದಂತೆ ಹಲವು ಬರಹಗಳನ್ನು ರಚಿಸಿದ್ದ ಅವರು, ಉತ್ತಮ ಭಾಷಣಕಾರರಾಗಿಯೂ ಹೆಸರುವಾಸಿಯಾಗಿದ್ದರು.

ಸಾಹಿತ್ಯ, ಮನೋವಿಜ್ಞಾನ ಹಾಗೂ ಸಮಾಜಮುಖಿ ಕ್ಷೇತ್ರಗಳಲ್ಲಿನ ಅವರ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ನಾಡಿನ ವಿವಿಧ ಪ್ರಶಸ್ತಿಗಳು ಅವರಿಗೆ ಲಭಿಸಿದ್ದವು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande